Colossians 3:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ ನೀವು ನಿಮ್ಮ ಹಳೆಯ ಪಾಪಪೂರಿತ ಜೀವನವನ್ನು ಮತ್ತು ನಿಮ್ಮ ಮೊದಲಿನ ಕಾರ್ಯಗಳನ್ನು ಬಿಟ್ಟುಬಿಟ್ಟಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.
Kannada BSI Bible 2016
ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಪೂರ್ವಸ್ವಭಾವವನ್ನು ಅದರ ಕೃತ್ಯಗಳ ಕೂಡ ತೆಗೆದಿಟ್ಟು ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.
Kannada Bible (KNCL) BSI 2016
ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ, ನಿಮ್ಮಲ್ಲಿದ್ದ ಹಳೆಯ ಸ್ವಭಾವವನ್ನೂ ಅದಕ್ಕೆ ಸಂಬಂಧಿಸಿದ ದುರಭ್ಯಾಸಗಳನ್ನೂ ತೊರೆದುಬಿಟ್ಟಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ನೀವು ಹಳೆಯ ಸ್ವಭಾವವನ್ನು ಅದರ ಕೃತ್ಯಗಳನ್ನು ಕೂಡ ತೆಗೆದು ಹಾಕಿದ್ದೀರಲ್ಲವೇ!