Colossians 4:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಜಮಾನರೇ, ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡಿರಿ. ಪರಲೋಕದಲ್ಲಿ ನಿಮಗೂ ಒಬ್ಬ ಯಜಮಾನನಿದ್ದಾನೆ ಎಂಬುದು ನಿಮ್ಮ ಜ್ಞಾಪಕದಲ್ಲಿರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರೊಂದಿಗೆ ನೀತಿಯಿಂದಲೂ ನ್ಯಾಯದಿಂದಲೂ ವರ್ತಿಸಿರಿ.
Kannada BSI Bible 2016
ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸಮ ವಾದದ್ದನ್ನೂ ಕೊಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರಿಗೆ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡಿರಿ.
Kannada Bible (KNCL) BSI 2016
ಯಜಮಾನರೇ, ಸ್ವರ್ಗಲೋಕದಲ್ಲಿ ನಿಮಗೂ ಒಬ್ಬ ಒಡೆಯನಿದ್ದಾನೆಂಬುದನ್ನು ತಿಳಿದುಕೊಂಡು ನಿಮ್ಮ ಮನೆಯಾಳುಗಳನ್ನು ನ್ಯಾಯಬದ್ಧ ರೀತಿಯಲ್ಲಿ ನೋಡಿಕೊಳ್ಳಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನಿದ್ದಾನೆಂದು ತಿಳಿದು ನಿಮ್ಮ ದಾಸರಿಗೆ ನ್ಯಾಯವಾದದ್ದನ್ನೂ, ಯೋಗ್ಯವಾದದ್ದನ್ನೂ ಕೊಡಿರಿ.