Colossians 4:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸುವು (ಯುಸ್ತನೆಂದೂ ಅವನನ್ನು ಕರೆಯುತ್ತಾರೆ.) ಸಹ ವಂದನೆಯನ್ನು ಹೇಳುತ್ತಾನೆ. ಯೆಹೂದ್ಯರಲ್ಲಿ ವಿಶ್ವಾಸಿಗಳಾಗಿರುವ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆ ಕೆಲಸ ಮಾಡುತ್ತಿದ್ದಾರೆ. ಇವರೇ ನನಗೆ ಆದರಣೆಯಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯುಸ್ತನೆನಿಸಿಕೊಳ್ಳುವ ಯೇಸು ಸಹ ನಿಮಗೆ ವಂದನೆ ಹೇಳುತ್ತಾನೆ. ಸುನ್ನತಿಯವರೊಳಗೆ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆಸೇವಕರಾಗಿದ್ದಾರೆ, ಇವರಿಂದ ನನಗೆ ಆದರಣೆ ಉಂಟಾಯಿತು.
Kannada BSI Bible 2016
ಯೂಸ್ತನೆನಿಸಿಕೊಳ್ಳುವ ಯೇಸುವೂ ನಿಮ್ಮನ್ನು ವಂದಿಸುತ್ತಾರೆ. ಇವರು ಸುನ್ನತಿಯವರಾಗಿ ದ್ದಾರೆ. ದೇವರ ರಾಜ್ಯಕ್ಕಾಗಿ ಇವರು ಮಾತ್ರ ನನ್ನ ಜೊತೆಗೆಲಸದವರಾಗಿದ್ದು ನನಗೆ ಆದರಣೆಯಾಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೂಸ್ತನೆನಿಸಿಕೊಳ್ಳುವ ಯೇಸು ಸಹ ನಿಮಗೆ ವಂದನೆ ಹೇಳುತ್ತಾನೆ. ಸುನ್ನತಿಯವರೊಳಗೆ ಇವರು ಮಾತ್ರವೇ ದೇವರ ರಾಜ್ಯಾಭಿವೃದ್ಧಿಗಾಗಿ ನನ್ನ ಜೊತೆಗೆಲಸದವರಾಗಿದ್ದಾರೆ; ಇವರಿಂದ ನನಗೆ ಉಪಶಮನ ಉಂಟಾಯಿತು.
Kannada Bible (KNCL) BSI 2016
ಯುಸ್ತನೆನಿಸಿಕೊಳ್ಳುವ ಯೇಸು ಕೂಡ ನಿಮಗೆ ವಂದನೆಗಳನ್ನು ತಿಳಿಸಿದ್ದಾನೆ. ಕ್ರೈಸ್ತರಾದ ಯೆಹೂದ್ಯರಲ್ಲಿ ಇವರೇ ನನ್ನೊಡನೆ ದೇವರ ಸಾಮ್ರಾಜ್ಯದ ಏಳಿಗೆಗಾಗಿ ದುಡಿಯುತ್ತಿರುವವರು. ಇವರಿಂದ ನನಗೆ ತುಂಬಾ ಆದರಣೆ ದೊರಕಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೂಸ್ತನೆನಿಸಿಕೊಳ್ಳುವ ಯೇಸುವೂ ನಿಮ್ಮನ್ನು ವಂದಿಸುತ್ತಾನೆ. ದೇವರ ರಾಜ್ಯಕ್ಕಾಗಿ ನನ್ನ ಜೊತೆ ಕೆಲಸದವರಾಗಿದ್ದವರಲ್ಲಿ ಇವರು ಮಾತ್ರವೇ ಯೆಹೂದ್ಯರು. ಇವರು ನನಗೆ ತುಂಬಾ ಆದರಣೆಯಾಗಿದ್ದರು.