Colossians 4:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಪಫ್ರನು ಸಹ ವಂದನೆ ತಿಳಿಸಿದ್ದಾನೆ. ಅವನು ಯೇಸು ಕ್ರಿಸ್ತನ ಸೇವಕನು. ಅವನು ನಿಮ್ಮವರಲ್ಲಿ ಒಬ್ಬನಾಗಿದ್ದಾನೆ. ಅವನು ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತಾನೆ. ನೀವು ಆತ್ಮಿಕತೆಯಲ್ಲಿ ಬೆಳೆಯುತ್ತಾ ಸಂಪೂರ್ಣತೆಯನ್ನು ಮುಟ್ಟಬೇಕೆಂತಲೂ ದೇವರ ಚಿತ್ತವನ್ನು ಪೂರ್ಣವಾಗಿ ತಿಳಿದುಕೊಂಡು ದೃಢವಾಗಿರಬೇಕೆಂತಲೂ ಪ್ರಾರ್ಥಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.
Kannada BSI Bible 2016
ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತ ಯೇಸುವಿನ ದಾಸನಾಗಿರುವ ನಿಮ್ಮ ಊರಿನ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ; ಇವನು ಪ್ರಾರ್ಥನೆ ಮಾಡುವಾಗೆಲ್ಲಾ ನಿಮಗೋಸ್ಕರ ಹೋರಾಡಿ ನೀವು ಪ್ರವೀಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ವಿಜ್ಞಾಪನೆ ಮಾಡುತ್ತಾನೆ.
Kannada Bible (KNCL) BSI 2016
ಕ್ರಿಸ್ತಯೇಸುವಿನ ಸೇವಕನೂ ನಿಮ್ಮ ಸಭೆಗೆ ಸೇರಿದವನೂ ಆದ ಎಪಫ್ರನಿಂದಲೂ ನಿಮಗೆ ವಂದನೆಗಳು. ನೀವು ಮಾಡುವ ಎಲ್ಲಾ ಕಾರ್ಯಗಳಲ್ಲೂ ದೇವರ ಚಿತ್ತಕ್ಕೆ ವಿಧೇಯರಾಗಿ ಸ್ಥಿರ ಹಾಗೂ ಸಿದ್ಧ ಕ್ರೈಸ್ತರಾಗಿ ಬಾಳಬೇಕೆಂದು ಅವನು ನಿಮಗಾಗಿ ಸದಾ ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮಲ್ಲಿ ಒಬ್ಬನೂ ಕ್ರಿಸ್ತ ಯೇಸುವಿನ ದಾಸನೂ ಆಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ದೇವರ ಚಿತ್ತದ ಬಗ್ಗೆ ಪರಿಪಕ್ವರಾಗಿ, ಪೂರ್ಣ ನಿಶ್ಚಯವುಳ್ಳವರಾಗಿ ನಿಂತು, ಎಲ್ಲಾ ವಿಷಯಗಳಲ್ಲಿ ನಿಮಗೋಸ್ಕರ ಆಸಕ್ತಿಯಿಂದ ಪ್ರಾರ್ಥನೆಗಳಲ್ಲಿ ಯಾವಾಗಲೂ ಹೋರಾಡುತ್ತಾನೆ.