Colossians 4:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಮಾತನಾಡುವಾಗಲೆಲ್ಲಾ ದಯೆಯುಳ್ಳವರಾಗಿಯೂ ಜ್ಞಾನವುಳ್ಳವರಾಗಿಯೂ ಮಾತನಾಡಿರಿ. ಆಗ ಪ್ರತಿಯೊಬ್ಬರಿಗೂ ಯೋಗ್ಯವಾದ ರೀತಿಯಲ್ಲಿ ಉತ್ತರಿಸಲು ಶಕ್ತರಾಗುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.
Kannada BSI Bible 2016
ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಸಂಭಾಷಣೆ ಯಾವಾಗಲೂ ಇಂಪಾಗಿಯೂ ರಸವತ್ತಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರಹೇಳಬೇಕೋ ಅದನ್ನು ತಿಳಿದುಕೊಳ್ಳುವಿರಿ.
Kannada Bible (KNCL) BSI 2016
ನಿಮ್ಮ ಸಂಭಾಷಣೆ ಯಾವಾಗಲೂ ಹಿತಕರವಾಗಿದ್ದು ಇತರರನ್ನು ಆಕರ್ಷಿಸುವಂತಿರಲಿ. ನೀವು ಯಾರು ಯಾರಿಗೆ, ಹೇಗೆ ಉತ್ತರಿಸಬೇಕು ಎಂಬುದನ್ನು ಕಲಿತುಕೊಳ್ಳಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಸಂಭಾಷಣೆ ಯಾವಾಗಲೂ ಪೂರ್ಣ ಕೃಪೆಯುಳ್ಳದ್ದೂ, ಉಪ್ಪಿನಿಂದ ಹದವುಳ್ಳದ್ದೂ ಆಗಿರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಹೇಗೆ ಉತ್ತರಕೊಡಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.