Colossians 4:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತುಖಿಕನು ಕ್ರಿಸ್ತನಲ್ಲಿ ನನ್ನ ಪ್ರೀತಿಯ ಸಹೋದರನಾಗಿದ್ದಾನೆ. ನನ್ನೊಡನೆ ಅವನೂ ಪ್ರಭುವಿನಲ್ಲಿ ನಂಬಿಗಸ್ತನಾದ ಸೇವಕನೂ ದಾಸನೂ ಆಗಿದ್ದಾನೆ. ನನಗೆ ಸಂಭವಿಸುತ್ತಿರುವುದನ್ನೆಲ್ಲ ಅವನು ನಿಮಗೆ ತಿಳಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಿಯ ಸಹೋದರನೂ, ನಂಬಿಗಸ್ತನಾದ ಸೇವಕನೂ ಮತ್ತು ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವನು.
Kannada BSI Bible 2016
ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವ ಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸ್ಥಿತಿಯನ್ನೆಲ್ಲಾ ನಿಮಗೆ ತಿಳಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸಂಗತಿಗಳನ್ನೆಲ್ಲಾ ನಿಮಗೆ ತಿಳಿಸುವನು.
Kannada Bible (KNCL) BSI 2016
ನಮ್ಮ ಪ್ರಿಯ ಸಹೋದರ ತುಖಿಕನು ನನ್ನ ವಿಷಯದಲ್ಲಿ ನಿಮಗೆ ಎಲ್ಲಾ ವರ್ತಮಾನವನ್ನು ಕೊಡುವನು. ಆತನು ಪ್ರಾಮಾಣಿಕ ಸೇವಕನೂ ಪ್ರಭುವಿನ ಸೇವೆಯಲ್ಲಿ ನನ್ನ ಸಂಗಡಿಗನೂ ಆಗಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯ ಸಹೋದರನೂ ನಂಬಿಗಸ್ತ ಸೇವಕನೂ ಮತ್ತು ಕರ್ತ ಯೇಸುವಿನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯವನ್ನೆಲ್ಲಾ ನಿಮಗೆ ತಿಳಿಸುವನು.