Colossians 4:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒನೇಸಿಮನು ಕ್ರಿಸ್ತನಲ್ಲಿ ನಂಬಿಗಸ್ತನಾದ ಪ್ರೀತಿಯ ಸಹೋದರನಾಗಿದ್ದಾನೆ. ಅವನು ನಿಮ್ಮ ಊರಿನವನೇ. ಇಲ್ಲಿ ಸಂಭವಿಸಿದ್ದೆಲ್ಲವನ್ನು ಅವರು ನಿಮಗೆ ತಿಳಿಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನನ್ನು ನಂಬಿಗಸ್ತನು ಮತ್ತು ಪ್ರಿಯ ಸಹೋದರನಾಗಿರುವ ನಿಮ್ಮ ಊರಿನವನೇ ಆದ ಓನೇಸಿಮನ ಜೊತೆಯಲ್ಲಿ ಕಳುಹಿಸಿದ್ದೇನೆ. ಅವರು ಇಲ್ಲಿ ನಡೆಯುತ್ತಿರುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು.
Kannada BSI Bible 2016
ನಿಮ್ಮಲ್ಲಿ ಒಬ್ಬನಾಗಿರುವ ನಂಬಿಗಸ್ತನೂ ಪ್ರಿಯ ಸಹೋದರನೂ ಆದ ಒನೇ ಸಿಮನ ಜೊತೆಯಲ್ಲಿ ಅವನನ್ನು ನಾನು ಕಳುಹಿಸಿದ್ದೇನೆ; ಅವರು ಇಲ್ಲಿ ನಡೆಯುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು ನಂಬಿಗಸ್ತನಾದ ಪ್ರಿಯ ಸಹೋದರನಾಗಿರುವ ನಿಮ್ಮ ಊರಿನ ಒನೇಸಿಮನ ಜೊತೆಯಲ್ಲಿ ಕಳುಹಿಸಿದ್ದೇನೆ. ಅವರು ಇಲ್ಲಿ ನಡೆಯುವ ಸಂಗತಿಗಳನ್ನೆಲ್ಲಾ ನಿಮಗೆ ತಿಳಿಸುವರು.
Kannada Bible (KNCL) BSI 2016
ಆತನ ಜೊತೆಯಲ್ಲಿ ನಂಬಿಕಸ್ಥನಾದ ಪ್ರಿಯ ಸಹೋದರ ಒನೇಸಿಮನನ್ನು ಕಳುಹಿಸುತ್ತಿದ್ದೇನೆ. ಇವನು ನಿಮ್ಮ ಊರಿನ ಸಭೆಗೆ ಸೇರಿದವನು. ಇಲ್ಲಿ ನಡೆಯುವುದನ್ನೆಲ್ಲಾ ಇವರು ನಿಮಗೆ ತಿಳಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮಲ್ಲಿ ಒಬ್ಬನಾಗಿರುವ ನಂಬಿಗಸ್ತನೂ, ಪ್ರಿಯ ಸಹೋದರನೂ ಆದ ಓನೇಸಿಮನ ಜೊತೆಯಲ್ಲಿ ಅವನನ್ನು ನಾನು ಕಳುಹಿಸಿದ್ದೇನೆ. ಅವರು ಇಲ್ಲಿ ನಡೆಯುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು.