Daniel 1:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾನಿಯೇಲನು ಕಾವಲುಗಾರನಿಗೆ, “ದಯವಿಟ್ಟು ಹತ್ತು ದಿನಗಳವರೆಗೆ ನಮ್ಮನ್ನು ಪರೀಕ್ಷಿಸಿರಿ. ತಿನ್ನುವದಕ್ಕೆ ಕಾಯಿಪಲ್ಯ, ಕುಡಿಯುವದಕ್ಕೆ ನೀರು, ಇವುಗಳ ಹೊರತು ನಮಗೆ ಇನ್ನೇನೂ ಕೊಡಬೇಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೇಮಿಸಿದ್ದ ವಿಚಾರಕನಿಗೆ, “ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಿನ್ನ ಸೇವಕರಾದ ನಮ್ಮನ್ನು ಪರೀಕ್ಷಿಸು; ಆಹಾರಕ್ಕೆ ಕಾಯಿಪಲ್ಯ ಮತ್ತು ಪಾನಕ್ಕೆ ನೀರು ನಮಗೆ ಒದಗಲಿ.
Kannada BSI Bible 2016
ನಿನ್ನ ಸೇವಕರನ್ನು ಹತ್ತು ದಿವಸಗಳ ವರೆಗೂ ಪರೀಕ್ಷಿಸಿ ನೋಡು, ಅವರು ನಮಗೆ ಆಹಾರಕ್ಕೆ ಕಾಯಿಪಲ್ಯಗಳನ್ನು ಕುಡಿಯುವದಕ್ಕೆ ನೀರನ್ನು ಕೊಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಿನ್ನ ಸೇವಕರಾದ ನಮ್ಮನ್ನು ಪರೀಕ್ಷಿಸು; ಆಹಾರಕ್ಕೆ ಕಾಯಿಪಲ್ಯ, ಪಾನಕ್ಕೆ ನೀರು ನಮಗೆ ಒದಗಲಿ;
Kannada Bible (KNCL) BSI 2016
“ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಮ್ಮನ್ನು ಪರೀಕ್ಷಿಸಿನೋಡು. ಸೇವಕರಾದ ನಮಗೆ ಭೋಜನಕ್ಕೆ ಬದಲಾಗಿ ಕಾಯಿಪಲ್ಯ, ಪಾನಕ್ಕೆ ಬದಲಾಗಿ ನೀರು ಒದಗಿಸಿದರೆ ಸಾಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿನ್ನ ಸೇವಕರನ್ನು ಹತ್ತು ದಿವಸಗಳವರೆಗೂ ಪರೀಕ್ಷಿಸಿ ನೋಡು. ಅವರು ನಮ್ಮ ಆಹಾರಕ್ಕೆ ಕೇವಲ ಕಾಯಿಪಲ್ಯಗಳನ್ನು, ಕುಡಿಯುವುದಕ್ಕೆ ಕೇವಲ ನೀರನ್ನು ಕೊಡಲಿ.