Daniel 10:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೋರೆಷನು ಪಾರಸಿಯ ರಾಜನಾಗಿದ್ದನು. ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. (ದಾನಿಯೇಲನ ಇನ್ನೊಂದು ಹೆಸರು ಬೇಲ್ತೆಶಚ್ಚರ.) ಈ ಸಂಗತಿ ಸತ್ಯವಾದುದು; ಆದರೆ ತಿಳಿದುಕೊಳ್ಳಲು ಬಹಳ ಕಷ್ಟಕರವಾಗಿತ್ತು. ದಾನಿಯೇಲನು ಈ ಸಂಗತಿಯನ್ನು ತಿಳಿದುಕೊಂಡನು. ಒಂದು ದರ್ಶನದಲ್ಲಿ ಅದರ ಬಗ್ಗೆ ಅವನಿಗೆ ವಿವರಿಸಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಾರಸಿಯ ರಾಜನಾದ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಅದು ಮಹಾಹೊರಾಟದ ಸಂಗತಿ ಸತ್ಯವಾದ ಸಂಗತಿ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮನದಟ್ಟು ಮಾಡಿಕೊಂಡನು.
Kannada BSI Bible 2016
ಪಾರಸಿಯ ಅರಸನಾದ ಕೋರೇಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆ ಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. ಬಹಳ ಕಷ್ಟದ ಆ ಸಂಗತಿಯು ಸತ್ಯವಾಗಿದೆ. ಅವನು ಕಂಡ ದರ್ಶನವನ್ನು ಗ್ರಹಿಸಿ ಆ ಸಂಗತಿಯನ್ನು ಮಂದಟ್ಟು ಮಾಡಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಾರಸಿಯ ರಾಜನಾದ ಕೋರೆಷನ ಆಳಿಕೆಯ ಮೂರನೆಯ ವರುಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಬಹು ಕಷ್ಟದ ಗಡುವಿನ ಆ ಸಂಗತಿಯು ಸತ್ಯ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮಂದಟ್ಟುಮಾಡಿಕೊಂಡನು.
Kannada Bible (KNCL) BSI 2016
ಪರ್ಷಿಯದ ರಾಜನಾದ ಸೈರೆಷನ ಆಳ್ವಿಕೆಯ ಮೂರನೇ ವರ್ಷದಲ್ಲಿ ಬೇಲ್ತೆಶಚ್ಚೆರನೆಂಬ ದಾನಿಯೇಲನಿಗೆ ಒಂದು ಸಂಗತಿ ಪ್ರಕಟವಾಯಿತು. ಅದು ಮಹಾ ಹೋರಾಟದ ಸಂಗತಿ, ಸತ್ಯವಾದ ಸಂಗತಿ. ಅದರ ಅರ್ಥವನ್ನು ತಾನು ಕಂಡ ದರ್ಶನದಿಂದ ಮನದಟ್ಟು ಮಾಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಾರಸಿಯ ಅರಸ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಪ್ರಕಟಣೆಯಾಯಿತು. ಅದರ ಸಂದೇಶವು ಸತ್ಯವಾದದ್ದು. ಅದು ಮಹಾ ಯುದ್ಧ ವಿಷಯವಾಗಿದೆ. ಸಂದೇಶದ ಅರ್ಥವು ಅವನಿಗೆ ಒಂದು ದರ್ಶನದಲ್ಲಿ ಬಂದಿತು.