Daniel 10:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಪಾರಸಿಯ ರಾಜ್ಯದ ದಿವ್ಯಪಾಲಕನು ನನ್ನೊಂದಿಗೆ ಕಳೆದ ಇಪ್ಪತ್ತೊಂದು ದಿನಗಳಿಂದ ಹೋರಾಡುತ್ತಿದ್ದನು; ನನಗೆ ತೊಂದರೆ ಕೊಡುತ್ತಿದ್ದನು. ಆಗ ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ನಾನು ಅಲ್ಲಿ ಪಾರಸಿಯ ರಾಜನ ಹತ್ತಿರ ಸಿಕ್ಕಿಹಾಕಿಕೊಂಡಿದ್ದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿನ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜರ ಸಂಗಡ ಹೋರಾಡಿ,
Kannada BSI Bible 2016
ಆದರೆ ಪಾರಸಿಯ ರಾಜ್ಯದ ಪ್ರಭುವು ಇಪ್ಪತ್ತೊಂದು ದಿವಸಗಳು ನನಗೆ ಎದುರು ನಿಂತನು; ಆದರೆ ಇಗೋ,ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ವಿಾಕಾಯೇಲನು ನನ್ನ ಸಹಾ ಯಕ್ಕೆ ಬಂದನು; ನಾನು ಆ ಪಾರಸೀಯ ಅರಸರ ಬಳಿಯಲ್ಲಿ ಉಳಿದುಕೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿವಸ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜನ ಸಂಗಡ [ಹೋರಾಡಿ]
Kannada Bible (KNCL) BSI 2016
ಪರ್ಷಿಯ ರಾಜ್ಯದ ಕಾವಲುದೂತನು ಇಪ್ಪತ್ತೊಂದು ದಿನ ನನ್ನನ್ನು ಎದುರಿಸಿ ನಿಂತನು. ಆದರೆ ಪ್ರಧಾನ ದೂತರಲ್ಲಿ ಒಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ಅಲ್ಲಿನ ಪರ್ಷಿಯ ರಾಜರ ಸಂಗಡ ಹೋರಾಡಲು ಅವನನ್ನು ಬಿಟ್ಟು ಬಂದಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪಾರಸಿಯ ರಾಜ್ಯದ ರಾಜಪುತ್ರನು ಇಪ್ಪತ್ತೊಂದು ದಿನ ನನ್ನನ್ನು ಎದುರಿಸಿ ನಿಂತನು. ಆದರೆ ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು. ಏಕೆಂದರೆ ನಾನು ಆ ಪಾರಸಿಯ ಅರಸನಿಂದ ತಡೆಹಿಡಿಯಲಾಗಿದ್ದೆನು.