Daniel 10:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಮನುಷ್ಯಕುಮಾರನಂತಿರುವವನು ನನ್ನ ತುಟಿಗಳನ್ನು ಸ್ಪರ್ಶಿಸಿದನು. ನಾನು ಬಾಯಿ ತೆರೆದು ಮಾತನಾಡಲು ಪ್ರಾರಂಭಿಸಿದೆ. ನನ್ನ ಎದುರಿಗೆ ನಿಂತುಕೊಂಡಿದ್ದವನಿಗೆ, “ಸ್ವಾಮಿ, ದರ್ಶನದಲ್ಲಿ ನೋಡಿದ ಸಂಗತಿಗಳಿಂದ ನಾನು ಚಿಂತಾಕ್ರಾಂತನಾಗಿದ್ದೇನೆ; ಅಂಜಿಕೊಂಡಿದ್ದೇನೆ; ನಿಸ್ಸಹಾಯಕನಾಗಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ನರರೂಪ ಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ, “ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಿತ್ರಾಣನಾಗಿದ್ದೇನೆ.
Kannada BSI Bible 2016
ಆಗ ಇಗೋ, ಮನುಷ್ಯಕುಮಾರನ ಹೋಲಿಕೆಯ ಹಾಗಿ ರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ಆಗ ನಾನು ಬಾಯಿತೆರೆದು ಮಾತನಾಡಿ ನನ್ನ ಮುಂದೆ ನಿಂತಿದ್ದವನಿಗೆ ಹೇಳಿದ್ದೇನಂದರೆ--ಓ ನನ್ನ ಒಡೆಯನೇ, ಆ ದರ್ಶನದ ನಿಮಿತ್ತ ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ; ನಾನು ತ್ರಾಣವನ್ನು ಉಳಿಸಿಕೊಳ್ಳ ಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನರರೂಪಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ - ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರವಿುಸಿವೆ, ನಿತ್ರಾಣನಾಗಿದ್ದೇನೆ.
Kannada Bible (KNCL) BSI 2016
ಆಗ ನರರೂಪ ಹೊಂದಿದ್ದ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದ. ನಾನು ಬಾಯಿ ತೆರೆದು ನನ್ನ ಮುಂದೆ ನಿಂತಿದ್ದವನಿಗೆ, “ಎನ್ನೊಡೆಯಾ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಾನು ನಿತ್ರಾಣನಾಗಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮಾನವನಂತೆ ಇರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ನಾನು ಬಾಯಿತೆರೆದು ಮಾತನಾಡಿ, ನನ್ನ ಮುಂದೆ ನಿಂತಿದ್ದವನಿಗೆ, “ನನ್ನ ಒಡೆಯನೇ, ಆ ದರ್ಶನದ ನಿಮಿತ್ತ, ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ, ನಾನು ನಿತ್ರಾಣನಾಗಿದ್ದೇನೆ.