Daniel 10:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸ್ವಾಮೀ, ನಾನು ನಿಮ್ಮ ಸೇವಕನಾದ ದಾನಿಯೇಲ. ನಾನು ನಿಮ್ಮ ಸಂಗಡ ಹೇಗೆ ಮಾತನಾಡಲಿ. ನನಗೆ ಶಕ್ತಿಯೇ ಇಲ್ಲದಂತಾಗಿದೆ. ಉಸಿರಾಡುವುದೂ ಕಷ್ಟವಾಗಿದೆ” ಎಂದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎನ್ನೊಡೆಯನ ಸೇವಕನಾದ ನನ್ನಂಥವನು ಎನ್ನೊಡೆಯನಾದ ನಿನ್ನಂಥವನ ಸಂಗಡ ಹೇಗೆ ಮಾತನಾಡಬಹುದು? ಈಗಿನಿಂದ ಶಕ್ತಿಯನ್ನೆಲ್ಲಾ ಕಳಕೊಂಡವನಾಗಿದ್ದೇನೆ, ನನ್ನಲ್ಲಿ ಉಸಿರೇ ಇಲ್ಲ” ಎಂದು ಹೇಳಿದೆನು.
Kannada BSI Bible 2016
ಈ ನಿನ್ನ ಒಡೆಯನ ಸೇವಕನು ನನ್ನ ಒಡೆಯನ ಸಂಗಡ ಹೇಗೆ ಮಾತನಾಡುವನು? ನನ್ನ ವಿಷಯ ವಾದರೋ ಆಗಿನಿಂದಲೂ ನನ್ನ ತ್ರಾಣವು ನನ್ನಲ್ಲಿ ಉಳಿಯಲಿಲ್ಲ; ಉಸಿರು ಸಹ ನನ್ನಲ್ಲಿ ಉಳಿಯಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎನ್ನೊಡೆಯನ ಸೇವಕನಾದ ನನ್ನಂಥವನು ಎನ್ನೊಡೆಯನಾದ ನಿನ್ನಂಥವನ ಸಂಗಡ ಹೇಗೆ ಮಾತಾಡಬಹುದು? ಈಗಿನಿಂದ ಶಕ್ತಿಯನ್ನೆಲ್ಲಾ ಕಳಕೊಂಡವನಾಗಿದ್ದೇನೆ, ನನ್ನಲ್ಲಿ ಉಸುರೇ ಇಲ್ಲ ಎಂದು ಹೇಳಿದೆನು.
Kannada Bible (KNCL) BSI 2016
ನನ್ನೊಡೆಯನ ದಾಸನಾದ ನನ್ನಂಥವನು ಎನ್ನೊಡೆಯರಾದ ತಮ್ಮಂಥವರ ಸಂಗಡ ಹೇಗೆ ಮಾತಾಡಬಹುದು? ಈಗ ಶಕ್ತಿಯನ್ನೆಲ್ಲಾ ಕಳೆದುಕೊಂಡಿದ್ದೇನೆ, ನನ್ನಲ್ಲಿ ಉಸಿರೇ ಇಲ್ಲವಾಗಿದೆ,” ಎಂದು ಹೇಳಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಒಡೆಯನ ದಾಸನಾದ ನನ್ನಂಥವನು ನನ್ನ ಒಡೆಯನಾದ ತಮ್ಮಂಥವರ ಸಂಗಡ ಹೇಗೆ ಮಾತಾಡಬಹುದು? ನನ್ನ ತ್ರಾಣವು ನನ್ನಲ್ಲಿ ಉಳಿಯಲಿಲ್ಲ, ಉಸಿರಾಡಿಸಲೂ ಆಗದು.”