Daniel 10:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಅವನು, “ದಾನಿಯೇಲನೇ, ನಾನು ಏಕೆ ಬಂದಿದ್ದೇನೆಂಬುದು ನಿನಗೆ ಗೊತ್ತಿಲ್ಲವೇ? ತಕ್ಷಣ ನಾನು ಪಾರಸಿಯ ರಾಜ್ಯದ ದಿವ್ಯಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು. ನಾನು ಹೋದಮೇಲೆ ಗ್ರೀಕ್ ರಾಜ್ಯದ ದಿವ್ಯಪಾಲಕನು ಬರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಂದು ಅರಿಕೆಮಾಡಲು ಅವನು ನನಗೆ ಹೀಗೆ ಹೇಳಿದನು, “ನಾನು ನಿನ್ನ ಬಳಿಗೆ ಏಕೆ ಬಂದೆನೆಂಬುದು ನಿನಗೆ ಗೊತ್ತಲ್ಲವೆ; ಈಗ ನಾನು ಪಾರಸಿಯ ರಾಜ್ಯದ ದಿವ್ಯ ಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು; ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಆಹಾ, ಗ್ರೀಕ್ ರಾಜ್ಯದ ದಿವ್ಯಪಾಲಕನು ಎದುರು ಬೀಳುವನು.
Kannada BSI Bible 2016
ಅವನು ಹೇಳಿದ್ದೇನಂದರೆ--ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ? ಈಗ ನಾನು ಪಾರಸಿಯ ಪ್ರಭುವಿನ ಸಂಗಡ (ಕಾದಾಡಲು) ತಿರುಗಿ ಹೋಗುತ್ತೇನೆ; ನಾನು ಹೋದ ಮೇಲೆ ಇಗೋ, ಗ್ರೀಕ್‌ ಪ್ರಭುವು ಬರುವನು.ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ನನಗೆ ಹೀಗೆ ಹೇಳಿದನು - ನಾನು ನಿನ್ನ ಬಳಿಗೆ ಏಕೆ ಬಂದೆನೆಂಬದು ನಿನಗೆ ಗೊತ್ತಲ್ಲವೆ; ಈಗ ನಾನು ಪಾರಸಿಯ ರಾಜ್ಯದ ದಿವ್ಯಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು; ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಆಹಾ, ಗ್ರೀಕ್‍ರಾಜ್ಯದ ದಿವ್ಯಪಾಲಕನು ಎದುರುಬೀಳುವನು.
Kannada Bible (KNCL) BSI 2016
ಅವನು ನನಗೆ ಹೀಗೆಂದು ಹೇಳಿದ: “ನಾನು ನಿನ್ನ ಬಳಿಗೆ ಏಕೆ ಬಂದೆನೆಂಬುದು ನಿನಗೆ ಗೊತ್ತಲ್ಲವೇ? ಈಗ ನಾನು ಪರ್ಷಿಯ ರಾಜ್ಯದ ಕಾವಲುದೂತನೊಂದಿಗೆ ಹೋರಾಡಲು ಹಿಂದಿರುಗಬೇಕು. ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಗ್ರೀಕ್ ರಾಜ್ಯದ ಕಾವಲುದೂತನು ಎದುರುಬೀಳುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು, “ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ. ಈಗ ನಾನು ಪಾರಸಿಯದ ರಾಜಪುತ್ರನ ಸಂಗಡ ಯುದ್ಧಮಾಡಲು ಹಿಂದಿರುಗಬೇಕು. ನಾನು ಹೋದ ಮೇಲೆ, ಗ್ರೀಕಿನ ರಾಜಕುಮಾರನು ಬರುವನು.