Daniel 10:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾನಿಯೇಲನೇ, ನಾನು ಹೋಗುವ ಮುಂಚೆ ‘ಸತ್ಯಶಾಸನ’ದಲ್ಲಿ ಏನು ಬರೆದಿದೆ ಎಂಬುದನ್ನು ನಿನಗೆ ಹೇಳುವೆನು. ಆ ದುಷ್ಟದೂತರೊಂದಿಗೆ ಹೋರಾಡುವಲ್ಲಿ ಮಿಕಾಯೇಲನ ಹೊರತು ನನಗೆ ಬೆಂಬಲವಾಗತಕ್ಕವರು ಇನ್ಯಾರೂ ಇಲ್ಲ. ಮಿಕಾಯೇಲನು ನಿಮ್ಮ ಜನರ ಪಾಲಕನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನ ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ ಎಂದನು.”
Kannada BSI Bible 2016
ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
(ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು.) ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನು ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ.
Kannada Bible (KNCL) BSI 2016
ಸತ್ಯಗ್ರಂಥದಲ್ಲಿ ಲಿಖಿತವಾದುದನ್ನು ಈಗ ನಿನಗೆ ತಿಳಿಸುತ್ತೇನೆ. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಕಾವಲುದೂತನಾದ ಮಿಕಾಯೇಲನ ಹೊರತು ನನಗೆ ಬೆಂಬಲಿಗರಾಗತಕ್ಕವರು ಇನ್ನಾರೂ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸತ್ಯ ಗ್ರಂಥದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುತ್ತೇನೆ. ನಿಮ್ಮ ರಾಜಕುಮಾರನಾದ ಮೀಕಾಯೇಲನ ಹೊರತು ಮತ್ತೆ ಯಾರೂ ಅವರಿಗೆ ವಿರೋಧವಾಗಿ ನನಗೆ ಸಹಕಾರ ಕೊಡುವುದಿಲ್ಲ.”