Daniel 10:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ದಾನಿಯೇಲನೆಂಬ ನನಗೆ ಮಾತ್ರ ಆ ದರ್ಶನವಾಯಿತು. ನನ್ನ ಜೊತೆಯಲ್ಲಿದ್ದವರಿಗೆ ಆ ದರ್ಶನ ಕಾಣಿಸಲಿಲ್ಲವಾದರೂ ಅವರು ಭಯಪಟ್ಟರು. ಅವರು ಭಯದಿಂದ ಓಡಿಹೋಗಿ ಅಡಗಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾನಿಯೇಲನಾದ ನಾನೊಬ್ಬನೇ ಆ ದರ್ಶನವನ್ನು ಕಂಡೆನು; ನನ್ನೊಂದಿಗಿದ್ದವರು ಅದನ್ನು ಕಾಣಲಿಲ್ಲ; ದೊಡ್ಡ ನಡುಕವು ಅವರನ್ನು ಹಿಡಿಯಿತು, ಓಡಿ ಹೋಗಿ ಅವಿತುಕೊಂಡರು.
Kannada BSI Bible 2016
ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಆ ಮನುಷ್ಯರು ಆ ದರ್ಶನವನ್ನು ನೋಡಲಿಲ್ಲ; ಆದರೆ ಒಂದು ಮಹಾ ಅದುರುವಿಕೆಯು ಅವರ ಮೇಲೆ ಬಿತ್ತು. ಆದದರಿಂದ ಅವರು ಓಡಿ ಹೋಗಿ ಅಡಗಿ ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾನಿಯೇಲನಾದ ನಾನೊಬ್ಬನೇ ಆ ದರ್ಶನವನ್ನು ಕಂಡೆನು; ನನ್ನೊಂದಿಗಿದ್ದವರು ಅದನ್ನು ಕಾಣಲಿಲ್ಲ; ದೊಡ್ಡ ನಡುಕವು ಅವರನ್ನು ಹಿಡಿಯಿತು, ಓಡಿ ಹೋಗಿ ಅವಿತುಕೊಂಡರು.
Kannada Bible (KNCL) BSI 2016
ಆ ದರ್ಶನವನ್ನು ಕಂಡವನು ದಾನಿಯೇಲನಾದ ನಾನೊಬ್ಬನೇ. ನನ್ನೊಂದಿಗೆ ಇದ್ದವರು ಅದನ್ನು ಕಾಣಲಿಲ್ಲ. ಅವರು ಭಯಭ್ರಾಂತರಾಗಿ ಓಡಿಹೋಗಿ ಅವಿತುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಜನರು ಆ ದರ್ಶನವನ್ನು ನೋಡಲಿಲ್ಲ. ಆದರೆ ಅವರು ಭಯಭ್ರಾಂತರಾಗಿ ಓಡಿಹೋಗಿ ಅಡಗಿಕೊಂಡರು.