Daniel 10:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನೊಬ್ಬನೇ ಅಲ್ಲಿದ್ದೆ. ನಾನು ಆ ದರ್ಶನವನ್ನು ನೋಡುತ್ತಲೇ ಇದ್ದೆ. ಅದರಿಂದ ನನಗೆ ಭಯವಾಯಿತು. ನಾನು ದುರ್ಬಲನಾದೆ. ನನ್ನ ಮುಖವು ಸತ್ತವರ ಮುಖದಂತೆ ಬಿಳುಪೇರಿತು; ನಾನು ನಿಸ್ಸಹಾಯಕನಾದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಏಕಾಂಗಿಯಾಗಿ ಉಳಿದು ಆ ಅದ್ಭುತ ದರ್ಶನವನ್ನು ಕಂಡು ಶಕ್ತಿಯನ್ನೆಲ್ಲಾ ಕಳೆದುಕೊಂಡೆನು, ನನ್ನ ಗಾಂಭೀರ್ಯವು ಹಾಳಾಯಿತು, ನಾನು ನಿತ್ರಾಣನಾದೆನು.
Kannada BSI Bible 2016
ನಾನು ಒಬ್ಬನೇ ಉಳಿದು ಈ ದೊಡ್ಡ ದರ್ಶನವನ್ನು ನೋಡಿದೆನು; ನನ್ನಲ್ಲಿ ತ್ರಾಣವು ಇರ ಲಿಲ್ಲ. ನನ್ನ ಸೌಂದರ್ಯವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಏಕಾಕಿಯಾಗಿ ಉಳಿದು ಆ ಅದ್ಭುತದರ್ಶನವನ್ನು ಕಂಡು ಶಕ್ತಿಯನ್ನೆಲ್ಲಾ ಕಳಕೊಂಡೆನು, ನನ್ನ ಗಾಂಭೀರ್ಯವು ಹಾಳಾಯಿತು, ನಿತ್ರಾಣನಾದೆನು.
Kannada Bible (KNCL) BSI 2016
ನಾನು ಒಂಟಿಯಾಗಿ ಉಳಿದು ಆ ಅದ್ಭುತವನ್ನು ಕಂಡೆ. ನನ್ನ ಶಕ್ತಿಯೆಲ್ಲಾ ಕರಗಿಹೋಯಿತು. ನನ್ನ ಗಾಂಭೀರ್ಯ ಅಳಿಯಿತು. ನಾನು ನಿತ್ರಾಣನಾದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಒಬ್ಬನೇ ಉಳಿದು, ಈ ಅದ್ಭುತ ದರ್ಶನವನ್ನು ನೋಡಿದೆನು. ನನ್ನಲ್ಲಿ ತ್ರಾಣವು ಇರಲಿಲ್ಲ. ನನ್ನ ಮುಖವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು.