Daniel 10:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು ಮಾತನಾಡುವದನ್ನು ನಾನು ಕೇಳಿದೆ. ಅವನ ಧ್ವನಿಯನ್ನು ಕೇಳಿದ ಕೂಡಲೇ ನಾನು ಬೋರಲುಬಿದ್ದು ಗಾಢವಾದ ನಿದ್ರೆಯಲ್ಲಿ ಮುಳುಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಅವನು ಮಾತನಾಡುವ ಶಬ್ದವನ್ನು ಕೇಳಿದೆನು; ಅವನ ಮಾತಿನ ಶಬ್ದವು ನನ್ನ ಕಿವಿಗೆ ಬಿದ್ದಾಗ ನಾನು ಮೈಮರೆತು ಬೋರಲು ಬಿದ್ದಿದ್ದೆನು.
Kannada BSI Bible 2016
ಆದಾಗ್ಯೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು, ಮತ್ತು ಆತನ ಮಾತುಗಳ ಧ್ವನಿಯನ್ನು ಕೇಳಿದಾಗ ಮುಖ ಕೆಳಗೆ ಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆಗೆ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಅವನು ಮಾತಾಡುವ ಸದ್ದನ್ನು ಕೇಳಿದೆನು; ಅವನ ಮಾತಿನ ಶಬ್ದವು ನನ್ನ ಕಿವಿಗೆ ಬಿದ್ದಾಗ ನಾನು ಮೈಮರೆತು ಅಡಿಮೊಗವಾಗಿ ಅಡ್ಡಬಿದ್ದಿದ್ದೆನು.
Kannada Bible (KNCL) BSI 2016
ಆದರೂ ಅವನು ಮಾತಾಡುವ ಶಬ್ದ ಕೇಳಿಸಿತು. ಅದು ನನ್ನ ಕಿವಿಗೆ ಬಿದ್ದಾಗ ನಾನು ಮೈಮರೆತು ಅಧೋಮುಖವಾಗಿ ಅಡ್ಡಬಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು. ಆತನ ಮಾತುಗಳ ಧ್ವನಿಯನ್ನು ಕೇಳಿದಾಗ, ಮುಖ ಕೆಳಗೆಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆ ಇತ್ತು.