Daniel 11:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉತ್ತರದ ಸೈನ್ಯವು ಸೋತು ಸೆರೆಯಾಗುವುದು. ದಕ್ಷಿಣ ರಾಜನು ತುಂಬ ಜಂಬಪಡುವನು ಮತ್ತು ಉತ್ತರದ ರಾಜನ ಸಾವಿರಾರು ಜನ ಸೈನಿಕರ ವಧೆ ಮಾಡುವನು. ಆದರೆ ಅವನು ಜಯಶೀಲನಾಗಿ ಮುಂದುವರೆಯುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಅವನ ಮನಸ್ಸು ಗರ್ವದಿಂದ ತುಂಬುವುದು. ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬರುವುದಿಲ್ಲ.
Kannada BSI Bible 2016
ಆ ಸಮೂಹವನ್ನು ಅವನು ತೆಗೆದು ಹಾಕಿದ ಮೇಲೆ ಅವನ ಹೃದಯವು ಹೆಚ್ಚಳಪಡುವದು; ಹೌದು, ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ ಪ್ರಬಲವಾಗ ಲಾರನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಿಂದ ಅವನ ಮನಸ್ಸು ಉಬ್ಬಿಕೊಳ್ಳುವದು; ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬಾರನು.
Kannada Bible (KNCL) BSI 2016
ಇದರಿಂದಾಗಿ ಅವನು ಗರ್ವಿಷ್ಠನಾಗುವನು. ಲಕ್ಷಾಂತರ ಸೈನಿಕರನ್ನು ಸದೆಬಡಿದಿದ್ದರೂ ಪ್ರಾಬಲ್ಯಕ್ಕೆ ಬಾರನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮಹಾ ಸೈನ್ಯವನ್ನು ಅವನು ತೆಗೆದುಹಾಕಿದ ಮೇಲೆ, ಅವನ ಹೃದಯವು ಹೆಚ್ಚಳ ಪಡುವುದು. ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ, ಪ್ರಾಬಲ್ಯಕ್ಕೆ ಬರುವುದಿಲ್ಲ.