Daniel 11:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಉತ್ತರದ ರಾಜನು ಬಂದು ಗೋಡೆಗಳಿಗೆ ದಿಬ್ಬಹಾಕಿ ಒಂದು ಭದ್ರವಾದ ನಗರವನ್ನು ವಶಪಡಿಸಿಕೊಳ್ಳುವನು. ದಕ್ಷಿಣದವರಲ್ಲಿ ಹೋರಾಡುವ ಶಕ್ತಿ ಇರುವದಿಲ್ಲ. ದಕ್ಷಿಣ ಸೈನ್ಯದ ಉತ್ತಮ ಸೈನಿಕರೂ ಕೂಡ ಉತ್ತರದ ಸೈನ್ಯವನ್ನು ತಡೆದು ನಿಲ್ಲಿಸಲು ಸಮರ್ಥರಾಗುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉತ್ತರ ದಿಕ್ಕಿನ ರಾಜನು ಬಂದು ದಿಬ್ಬ ಹಾಕಿ, ಕೋಟೆ ಕೊತ್ತಲದ ಪಟ್ಟಣವನ್ನು ಹಿಡಿಯುವನು; ದಕ್ಷಿಣದ ಭುಜಬಲವು ನಿಲ್ಲದು, ಅಲ್ಲಿನ ಮಹಾವೀರರು ತಡೆಯಲಾರರು, ಎದುರಿಸುವ ಯಾವ ಶಕ್ತಿಯೂ ಇರದು.
Kannada BSI Bible 2016
ಆದರೆ ಉತ್ತರದ ಅರಸನು ಬಂದು ಮುತ್ತಿಗೆ ಹಾಕಿ ದಿಬ್ಬವನ್ನು ಕೆಡವಿ ಕೋಟೆಯುಳ್ಳ ಪಟ್ಟಣಗಳನ್ನು ವಶಪಡಿಸಿಕೊಳ್ಳು ವನು; ದಕ್ಷಿಣದ ಭುಜಬಲವಾದರೂ ಅವನು ಆದು ಕೊಂಡ ಜನರಾದರೂ ನಿಲ್ಲುವದಕ್ಕೆ ಬಲವಿರುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಉತ್ತರರಾಜನು ಬಂದು ದಿಬ್ಬಹಾಕಿ ಕೋಟೆಕೊತ್ತಲದ ಪಟ್ಟಣವನ್ನು ಹಿಡಿಯುವನು; ದಕ್ಷಿಣದ ಭುಜಬಲವು ನಿಲ್ಲದು, ಅಲ್ಲಿನ ಮಹಾವೀರರು ತಡೆಯಲಾರರು, ಎದುರಿಸುವ ಯಾವ ಶಕ್ತಿಯೂ ಇರದು.
Kannada Bible (KNCL) BSI 2016
ಉತ್ತರರಾಜನು ಬಂದು, ಮುತ್ತಿಗೆಹಾಕಿ, ಕೋಟೆಕೊತ್ತಲದ ನಗರವನ್ನು ಹಿಡಿಯುವನು. ದಕ್ಷಿಣದ ಭುಜಬಲವು ಅವನನ್ನು ನಿಲ್ಲಿಸಲಾರದು. ಅಲ್ಲಿನ ಮಹಾವೀರರು ತಡೆಯಲಾರರು. ಎದುರಿಸುವ ಯಾವ ಶಕ್ತಿಯೂ ಇರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಉತ್ತರದ ಅರಸನು ಬಂದು ಮುತ್ತಿಗೆ ಹಾಕಿ, ದಿಬ್ಬವನ್ನು ಕೆಡವಿ, ಕೋಟೆಯುಳ್ಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವನು. ದಕ್ಷಿಣದ ಭುಜಬಲವಾದರೂ ಅವನು ಆಯ್ದುಕೊಂಡ ಜನರಾದರೂ ಎದುರಿಸಿ ನಿಲ್ಲುವುದಕ್ಕೆ ಅಶಕ್ತರಾಗುವರು.