Daniel 11:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ದಾನಿಯೇಲನೇ, ಈಗ ನಾನು ನಿನಗೆ ಸತ್ಯಾಂಶವನ್ನು ಹೇಳುತ್ತೇನೆ ಕೇಳು. ಪಾರಸಿಯ ದೇಶದಲ್ಲಿ ಇನ್ನೂ ಮೂರು ಜನ ರಾಜರು ಆಳುವರು. ಆಮೇಲೆ ನಾಲ್ಕನೆಯ ರಾಜನು ಬರುವನು. ನಾಲ್ಕನೆಯ ರಾಜನು ತನಗಿಂತ ಮುಂಚೆ ಆಗಿ ಹೋದ ಪಾರಸಿಯ ದೇಶದ ಎಲ್ಲ ರಾಜರಿಗಿಂತ ಅಧಿಕ ಧನವಂತನಾಗಿರುವನು. ಆ ನಾಲ್ಕನೆಯ ರಾಜನು ತನ್ನ ಪ್ರಾಬಲ್ಯವನ್ನು ಬೆಳೆಸಿಕೊಳ್ಳುವದಕ್ಕೆ ಧನವನ್ನು ಬಳಸಿಕೊಳ್ಳುವನು. ಎಲ್ಲರೂ ಗ್ರೀಸ್ ರಾಜ್ಯದ ವಿರುದ್ಧವಾಗುವಂತೆ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು, “ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು.
Kannada BSI Bible 2016
ನಾನು ಈಗ ನಿನಗೆ ಸತ್ಯವನ್ನು ತಿಳಿಸುತ್ತೇನೆ; ಇಗೋ, ಪಾರಸಿಯರಲ್ಲಿ ಇನ್ನು ಮೂರು ಅರಸರು ನಿಲ್ಲುವರು; ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು; ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸು ವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು. ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು.
Kannada Bible (KNCL) BSI 2016
“ಈಗ ಸತ್ಯಾಂಶವನ್ನು ತಿಳಿಸುತ್ತೇನೆ, ಕೇಳು: ಪರ್ಷಿಯ ದೇಶದಲ್ಲಿ ಇನ್ನೂ ಮೂವರು ರಾಜರು ಏಳುವರು. ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು. ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧ ತನ್ನ ಬಲವನ್ನೆಲ್ಲ ಪ್ರಯೋಗಿಸುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಈಗ ಸತ್ಯವನ್ನು ತಿಳಿಸುತ್ತೇನೆ. ಪಾರಸಿಯ ದೇಶದಲ್ಲಿ ಇನ್ನೂ ಮೂರು ಅರಸರು ಏಳುವರು. ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು. ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸುವನು.