Daniel 11:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ದೊಡ್ಡದಾದ ಮತ್ತು ಶಕ್ತಿಶಾಲಿಯಾದ ಸೈನ್ಯಗಳನ್ನು ಸೋಲಿಸುತ್ತಾನೆ. ಅವನು ಒಪ್ಪಂದ ಮಾಡಿಕೊಂಡ ನಾಯಕನಿಗೂ ಮೋಸಮಾಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತುಂಬಿ ತುಳುಕುವ ವ್ಯೂಹಗಳೂ, ದೇವರ ನಿಬಂಧನಾಧಿಪತಿಯೂ ಅವನ ರಭಸಕ್ಕೆ ಸಿಕ್ಕಿ ಹೊಡೆದುಕೊಂಡು ಹೋಗಿ ಭಂಗವಾಗುವರು.
Kannada BSI Bible 2016
ಪ್ರವಾಹದಂತಿರುವ ಆ ವ್ಯೂಹಗಳೂ ಒಡಂಬಡಿಕೆಯ ಪ್ರಧಾನನೂ ಅವನ ರಭಸಕ್ಕೆ ಸಿಕ್ಕಿ ಒಡೆದುಕೊಂಡು ಹೋಗಿ ಮುರಿದು ಹೋಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತುಂಬಿತುಳುಕುವ ವ್ಯೂಹಗಳೂ ದೇವರ ನಿಬಂಧನಾಧಿಪತಿಯೂ ಅವನ ರಭಸಕ್ಕೆ ಸಿಕ್ಕಿ ಹೊಡೆದುಕೊಂಡು ಹೋಗಿ ಭಂಗವಾಗುವರು.
Kannada Bible (KNCL) BSI 2016
ಅವನನ್ನು ಎದುರಿಸುವ ದೊಡ್ಡ ದೊಡ್ಡ ಸೈನ್ಯಗಳು ಹಾಗು ದೇವರ ಪ್ರಧಾನ ಯಾಜಕನು ಅವನ ಸೈನ್ಯ ಪ್ರವಾಹಕ್ಕೆ ಸಿಕ್ಕಿ ಅದರಲ್ಲಿ ಮುಳುಗಿ ನಾಶವಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರವಾಹದಂತಿರುವ ಆ ಸೈನ್ಯವೂ, ಒಡಂಬಡಿಕೆಯ ರಾಜಕುಮಾರನೂ ಅವನ ರಭಸಕ್ಕೆ ಸಿಕ್ಕಿ ಒಡೆದುಹೋಗಿ ನಾಶವಾಗುವರು.