Daniel 11:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಕ್ರೂರನಾದ ಮತ್ತು ವಂಚಕನಾದ ಆ ರಾಜನ ಹತ್ತಿರ ಅತಿ ದೊಡ್ಡ ಸೈನ್ಯವಿರುವದು. ಅವನು ಆ ಸೈನ್ಯದಿಂದ ತನ್ನ ಶಕ್ತಿಯನ್ನು ಪ್ರದರ್ಶಿಸಲು ಧೈರ್ಯ ತಂದುಕೊಂಡು ದಕ್ಷಿಣದ ರಾಜನ ಮೇಲೆ ದಾಳಿ ಮಾಡುವನು. ದಕ್ಷಿಣದ ರಾಜನು ಅತಿದೊಡ್ಡದಾದ ಮತ್ತು ಶಕ್ತಿಶಾಲಿಯಾದ ಸೈನ್ಯವನ್ನು ಕೂಡಿಸಿಕೊಂಡು ಯುದ್ಧಕ್ಕೆ ಹೋಗುವನು. ಆದರೆ ಅವನ ವೈರಿಗಳು ರಹಸ್ಯವಾಗಿ ಒಂದು ಕುಯುಕ್ತಿಯನ್ನು ಮಾಡುವರು. ದಕ್ಷಿಣದ ರಾಜನು ಸೋಲುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ದೊಡ್ಡ ದಂಡೆತ್ತಿ ದಕ್ಷಿಣ ದಿಕ್ಕಿನ ರಾಜನ ವಿರುದ್ಧವಾಗಿ ತನ್ನ ರಾಜ್ಯದ ಬಲವನ್ನೆಲ್ಲ ಕೂಡಿಸಿ ಧೈರ್ಯದಿಂದ ಹೊರಡುವನು. ದಕ್ಷಿಣ ದಿಕ್ಕಿನ ರಾಜನು ಅತ್ಯಧಿಕ ಬಲವುಳ್ಳ ಮಹಾ ಸೈನ್ಯಸಮೇತನಾಗಿ ಯುದ್ಧಕ್ಕೆ ಹೊರಡುವನು. ಆದರೆ ನಿಲ್ಲಲಾರನು, ಅವನು ಸೋಲುವ ಹಾಗೆ ಕುಯುಕ್ತಿಗಳನ್ನು ಕಲ್ಪಿಸುವನು.
Kannada BSI Bible 2016
ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ದಂಡೆತ್ತಿ ಬರುವನು; ದಕ್ಷಿಣದ ಅರಸನೂ ಅಧಿಕ ಬಲವುಳ್ಳ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು. ಆದರೆ ನಿಲ್ಲಲಾರದೆ ಹೋಗುವನು. ಯಾಕಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ದೊಡ್ಡ ದಂಡೆತ್ತಿ ದಕ್ಷಿಣರಾಜನಿಗೆ ವಿರುದ್ಧವಾಗಿ ತನ್ನ ರಾಜ್ಯದ ಬಲವನ್ನೆಲ್ಲ ಕೂಡಿಸಿ ಧೈರ್ಯತಂದುಕೊಳ್ಳಲು ದಕ್ಷಿಣರಾಜನು ಅತ್ಯಧಿಕ ಬಲವುಳ್ಳ ಮಹಾ ಸೈನ್ಯಸಮೇತನಾಗಿ ಯುದ್ಧಕ್ಕೆ ಹೊರಡುವನು; ಆದರೆ ನಿಲ್ಲಲಾರನು; ಅವನು ಸೋಲುವ ಹಾಗೆ ಕುಯುಕ್ತಿಗಳನ್ನು ಕಲ್ಪಿಸುವರು.
Kannada Bible (KNCL) BSI 2016
“ಅವನು ಧೈರ್ಯತಂದುಕೊಂಡು, ದೊಡ್ಡ ದಂಡೆತ್ತಿ, ದಕ್ಷಿಣರಾಜನಿಗೆ ವಿರುದ್ಧ ತನ್ನ ರಾಜ್ಯದ ಶಕ್ತಿಯನ್ನೆಲ್ಲ ಕೂಡಿಸುವನು. ದಕ್ಷಿಣರಾಜನಾದರೋ ಅತ್ಯಧಿಕ ಬಲವುಳ್ಳ ಮಹಾಸೈನ್ಯ ಸಮೇತನಾಗಿ ಯುದ್ಧಕ್ಕೆ ಹೊರಡುವನು. ಆದರೆ ಜಯಗಳಿಸನು. ಕುಯುಕ್ತಿಗಳಿಗೆ ಗುರಿಯಾಗಿ ಸೋಲನ್ನು ಅಪ್ಪಬೇಕಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು, ಆದರೆ ನಿಲ್ಲಲಾರದೆ ಹೋಗುವನು. ಏಕೆಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.