Daniel 11:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಇಬ್ಬರು ಅರಸರು ಒಬ್ಬರಿಗೊಬ್ಬರು ಕೇಡುಮಾಡಬೇಕೆಂದು ನಿಶ್ಚಯಿಸುವರು. ಅವರಿಬ್ಬರೂ ಒಂದೇ ಮೇಜಿನಲ್ಲಿ ಕುಳಿತುಕೊಳ್ಳುವರು ಮತ್ತು ಒಬ್ಬರಿಗೊಬ್ಬರು ಸುಳ್ಳು ಹೇಳುವರು. ಆದರೆ ಇದರಿಂದ ಅವರಿಬ್ಬರಲ್ಲಿ ಯಾರಿಗೂ ಒಳ್ಳೆಯದಾಗುವದಿಲ್ಲ. ಏಕೆಂದರೆ ದೇವರು ಅವರ ಅಂತ್ಯಕಾಲವನ್ನು ನಿರ್ಧರಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಇಬ್ಬರು ರಾಜರು ಒಬ್ಬರಿಗೊಬ್ಬರು ಕೇಡಿನ ಮನಸುಳ್ಳವರಾಗಿ ಸಹ ಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತನಾಡಿಕೊಳ್ಳುವರು. ಆದರೆ ಏನೂ ಸಾಗದು, ಪರಿಣಾಮವು ನಿಶ್ಚಿತ ಕಾಲದಲ್ಲೇ ತಲೆದೋರುವುದು.
Kannada BSI Bible 2016
ಈ ಇಬ್ಬರು ಅರಸರ ಹೃದಯ ಗಳನ್ನು ಕೇಡನ್ನು ಮಾಡುವಂತವುಗಳಾಗಿರುವವು; ಒಂದೇ ಮೇಜಿನಲ್ಲಿ ಕುಳಿತು ಸುಳ್ಳು ಹೇಳುವರು; ಆದರೆ ಅದು ಅನುಕೂಲವಾಗದು; ಅದು ಹೇಗಾದರೂ ನಿಯಮಿಸಲ್ಪಟ್ಟ ಕಾಲದಲ್ಲಿ ಅಂತ್ಯವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಇಬ್ಬರು ರಾಜರು [ಒಬ್ಬರಿಗೊಬ್ಬರು] ಕೇಡಿನ ಮನಸ್ಸುಳ್ಳವರಾಗಿ ಸಹಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತಾಡಿಕೊಳ್ಳುವರು; ಆದರೆ ಏನೂ ಸಾಗದು; ಪರಿಣಾಮವು ಕ್ಲುಪ್ತಕಾಲದಲ್ಲೇ ತಲೆದೋರುವದು.
Kannada Bible (KNCL) BSI 2016
ಆ ಇಬ್ಬರು ರಾಜರು ಪರಸ್ಪರ ಕೇಡಿನ ಮನಸ್ಸು ಉಳ್ಳವರಾಗಿ ಸಹಪಂಕ್ತಿಯಲ್ಲಿ ಕುಳಿತಿದ್ದರೂ ಸುಳ್ಳುಪೊಳ್ಳು ಮಾತಾಡಿಕೊಳ್ಳುವರು. ಆದರೆ ನಿಶ್ಚಿತಕಾಲ ಬರುವ ತನಕ ಅವರಿಂದ ಏನೂ ಸಾಧಿಸಲಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಇಬ್ಬರ ಅರಸನ ಹೃದಯಗಳು ಕೇಡನ್ನು ಮಾಡುವಂತವುಗಳಾಗಿರುವುವು. ಒಂದೇ ಮೇಜಿನಲ್ಲಿ ಕುಳಿತು ಒಬ್ಬರಿಗೊಬ್ಬರು ಸುಳ್ಳು ಹೇಳುವರು. ಆದರೆ ಅದು ಅನುಕೂಲವಾಗದು. ಏಕೆಂದರೆ ಅದು ಹೇಗಾದರೂ ನಿಶ್ಚಿತ ಕಾಲದಲ್ಲಿಯೇ ಅಂತ್ಯವಾಗುವುದು.