Daniel 11:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಉತ್ತರದ ರಾಜನು ಅಪಾರ ಸಂಪತ್ತಿನೊಂದಿಗೆ ಸ್ವದೇಶಕ್ಕೆ ಮರಳುವನು. ಆಗ ಅವನು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿ ಆಚರಿಸುವ ತೀರ್ಮಾನ ಮಾಡುವನು. ಅವನು ಯೋಚಿಸಿದಂತೆ ಮಾಡಿ ತನ್ನ ದೇಶಕ್ಕೆ ಹಿಂತಿರುಗಿ ಹೋಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಉತ್ತರ ದಿಕ್ಕಿನ ರಾಜನು ಬಹಳ ಆಸ್ತಿಯನ್ನು ಐಶ್ವರ್ಯವನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂದಿರುಗುವನು. ಅವನ ಮನಸ್ಸು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿರುವುದು. ಅವನು ತನಗೆ ಇಷ್ಟ ಬಂದಂತೆ ಮಾಡಿ ಮತ್ತೆ ಸ್ವದೇಶವನ್ನು ಸೇರುವನು.
Kannada BSI Bible 2016
ಆಗ ಅವನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂತಿರುಗವನು; ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವದು; ಅವನು ಹೀಗೆ ಕಾರ್ಯ ಸಾಧಿಸಿ ಸ್ವಂತ ದೇಶಕ್ಕೆ ಹಿಂತಿರುಗುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಉತ್ತರರಾಜನು ಬಹು ಆಸ್ತಿಯನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂದಿರುಗುವನು; ಅವನ ಮನಸ್ಸು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿರುವದು; ಅವನು ಮಾಡುವಷ್ಟು ಮಾಡಿ ಮತ್ತೆ ಸ್ವದೇಶವನ್ನು ಸೇರುವನು.
Kannada Bible (KNCL) BSI 2016
ಅನಂತರ ಉತ್ತರದ ಆ ನೀಚರಾಜನು ಬಹು ಆಸ್ತಿಯನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂತಿರುಗುವನು. ಅವನ ಮನಸ್ಸು ಪವಿತ್ರ ಒಡಂಬಡಿಕೆಗೆ ವಿರುದ್ಧವಾಗಿರುವುದು. ಇಷ್ಟಬಂದ ಹಾಗೆ ವರ್ತಿಸಿ ಮತ್ತೆ ಸ್ವದೇಶವನ್ನು ಸೇರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಉತ್ತರದ ಅರಸನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂದಿರುಗುವನು, ಆದರೆ ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವುದು; ಅವನು ಇದಕ್ಕೆ ವಿರುದ್ಧವಾಗಿ ಕಾರ್ಯಸಾಧಿಸಿ, ಸ್ವಂತ ದೇಶಕ್ಕೆ ಹಿಂದಿರುಗುವನು.