Daniel 11:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಿತ್ತೀಮಿನ ಹಡಗುಗಳು ಬಂದು ಉತ್ತರದ ರಾಜನೊಂದಿಗೆ ಯುದ್ಧ ಮಾಡುವವು. ಆ ಹಡಗುಗಳು ಬರುವದನ್ನು ಅವನು ನೋಡಿ ಹೆದರಿಕೊಳ್ಳುವನು. ಅವನು ಪರಿಶುದ್ಧ ನಿಬಂಧನೆಯ ಮೇಲೆ ಕೋಪಿಸಿಕೊಂಡು ಹಿಂತಿರುಗುವನು. ಅವನು ಹಿಂತಿರುಗಿದ ಮೇಲೆ ಪರಿಶುದ್ಧ ನಿಬಂಧನೆಯನ್ನು ತೊರೆದವರಿಗೆ ಸಹಾಯ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ವಿರುದ್ಧವಾಗಿ ಕಿತ್ತೀಮಿನ ಹಡಗುಗಳು ಬರಲು, ಅವನು ಎದೆಗುಂದಿ ಹಿಂದಿರುಗಿ ಪರಿಶುದ್ಧ ನಿಬಂಧನೆಯ ಮೇಲೆ ಮತ್ಸರಗೊಂಡು ತನಗೆ ಇಷ್ಟ ಬಂದಂತೆ ಮಾಡುವನು. ಅವನು ಸ್ವದೇಶಕ್ಕೆ ಸೇರಿ ಪರಿಶುದ್ಧ ನಿಬಂಧನೆಯನ್ನು ತೊರೆದವರನ್ನು ಕಟಾಕ್ಷಿಸುವನು.
Kannada BSI Bible 2016
ಕಿತ್ತೀಮಿನ ಹಡಗು ಗಳು ಅವನಿಗೆ ವಿರೋಧವಾಗಿ ಬರುವವು. ಆದದರಿಂದ ಅವನು ಎದೆಗುಂದಿ ಪರಿಶುದ್ಧ ಒಡಂಬಡಿಕೆಗೆ ವಿರೋಧ ವಾಗಿ ಅವನು ಕೋಪಿಸಿ ಹೀಗೆ ಮಾಡುವನು. ಹಿಂತಿರುಗಿ ಸೇರಿ ಪರಿಶುದ್ಧ ಒಡಂಬಡಿಕೆಯನ್ನು ತೊರೆದವನ ಸಂಗಡ ಜ್ಞಾನಿಯಾಗುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ ವಿರುದ್ಧವಾಗಿ ಕಿತ್ತೀವಿುನ ಹಡಗುಗಳು ಬರಲು ಅವನು ಎದೆಗುಂದಿ ಹಿಂದಿರುಗಿ ಪರಿಶುದ್ಧ ನಿಬಂಧನೆಯ ಮೇಲೆ ಮತ್ಸರಗೊಂಡು ಮಾಡುವಷ್ಟು ಮಾಡುವನು; ಅವನು ಸ್ವದೇಶಕ್ಕೆ ಸೇರಿ ಪರಿಶುದ್ಧ ನಿಬಂಧನೆ ತೊರೆದವರನ್ನು ಕಟಾಕ್ಷಿಸುವನು.
Kannada Bible (KNCL) BSI 2016
ಅವನಿಗೆ ವಿರುದ್ಧವಾಗಿ ರೋಮಿನ ಹಡಗುಗಳು ಬರಲು ಅವನು ಎದೆಗುಂದಿ ಹಿಂದಿರುಗುವನು. ಪವಿತ್ರ ಒಡಂಬಡಿಕೆಯ ವಿರುದ್ಧ ಮತ್ಸರಗೊಂಡು ಸಾಧ್ಯವಾದಷ್ಟೂ ಹಾನಿಮಾಡುವನು. ಸ್ವದೇಶಕ್ಕೆ ಹಿಂದಿರುಗಿ ಪವಿತ್ರ ಒಡಂಬಡಿಕೆಯನ್ನು ತೊರೆದವರಿಗೆ ಆದರ ತೋರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಕಿತ್ತೀಮಿನ ಹಡಗುಗಳು ಅವನಿಗೆ ವಿರೋಧವಾಗಿ ಬರುವುವು. ಆದ್ದರಿಂದ ಅವನು ಎದೆಗುಂದಿ, ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿ ಕೋಪಿಸಿಕೊಳ್ಳುವನು. ಹಿಂದಿರುಗಿ ಬಂದು ಪರಿಶುದ್ಧ ಒಡಂಬಡಿಕೆಯನ್ನು ತೊರೆದವರಿಗೆ ದಯೆ ತೋರಿಸುವನು.