Daniel 11:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಉತ್ತರದ ರಾಜನು ಪರಿಶುದ್ಧ ನಿಬಂಧನೆಯನ್ನು ತೊರೆದ ಯೊಹೂದ್ಯರನ್ನು ಸುಳ್ಳುಮಾತುಗಳಿಂದ ಮತ್ತು ನಯವಾದ ನುಡಿಗಳಿಂದ ವಂಚಿಸುವನು. ಆ ಯೆಹೂದ್ಯರು ಅದಕ್ಕಿಂತಲೂ ಹೆಚ್ಚಿನ ಪಾಪಕೃತ್ಯಗಳನ್ನು ಮಾಡುವರು. ಆದರೆ ದೇವರನ್ನು ಅರಿತು ಆತನ ಆಜ್ಞೆ ಪಾಲಿಸುತ್ತಿರುವ ಯೆಹೂದ್ಯರು ದೃಢಚಿತ್ತರಾಗಿರುವರು; ಅವರು ಅವನನ್ನು ವಿರೋಧಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಬಂಧನ ದ್ರೋಹಿಗಳು ಅವನ ನಯನುಡಿಗಳಿಂದ ಕೆಟ್ಟುಹೋಗುವರು. ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು.
Kannada BSI Bible 2016
ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆ ಯುವವರನ್ನು ವ್ಯರ್ಥವಾದ ಮಾತುಗಳಿಂದ ಕೆಡಿ ಸುವನು; ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಕೃತಾರ್ಥರಾಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಬಂಧನದ್ರೋಹಿಗಳು ಅವನ ನಯನುಡಿಗಳಿಂದ ಕೆಟ್ಟುಹೋಗುವರು; ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು.
Kannada Bible (KNCL) BSI 2016
ಒಡಂಬಡಿಕೆಯ ದ್ರೋಹಿಗಳು ಅವನ ನಯನುಡಿಗೆ ಮಾರುಹೋಗುವರು. ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆಯುವವರನ್ನು ನಯವಾದ ಮಾತುಗಳಿಂದ ಕೆಡಿಸುವನು, ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಎದುರಿಸುವರು.