Daniel 11:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಜ್ಞಾನಿಗಳಾದ ಯೆಹೂದ್ಯರು ಏನು ನಡೆದಿದೆ ಎಂಬುದನ್ನು ತಿಳಿದುಕೊಳ್ಳಲು ಜನರಿಗೆ ಸಹಾಯ ಮಾಡುವರು. ಜ್ಞಾನಿಗಳಾದವರು ಸಹ ಅನೇಕ ಹಿಂಸೆಗಳಿಗೆ ತುತ್ತಾಗುವರು. ಕೆಲವು ಜನ ಜ್ಞಾನಿಗಳು ಕತ್ತಿಯಿಂದ ಕೊಲ್ಲಲ್ಪಡುವರು, ಕೆಲವರನ್ನು ಬೆಂಕಿಯಲ್ಲಿ ಹಾಕಲಾಗುವದು ಅಥವಾ ಬಂಧಿಸಲಾಗುವುದು. ಕೆಲವು ಯೆಹೂದ್ಯರ ಮನೆಯನ್ನು, ಆಸ್ತಿಪಾಸ್ತಿಯನ್ನು ಕಿತ್ತುಕೊಳ್ಳಲಾಗುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ, ಅವರು ಬಹಳ ದಿನ ಕತ್ತಿ, ಬೆಂಕಿ, ಸೆರೆಸೂರೆಗಳಿಗೆ ಸಿಕ್ಕಿ ಬೀಳುವರು.
Kannada BSI Bible 2016
ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದಾಗ್ಯೂ ಕತ್ತಿಯಿಂದಲೂ ಬೆಂಕಿಯಿಂದಲೂ ಸೆರೆ ಯಿಂದಲೂ ಕೊಳ್ಳೆಯಿಂದಲೂ ಅನೇಕ ದಿನಗಳು ಸಿಕ್ಕಿಬೀಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ ಅವರು ಬಹು ದಿವಸ ಕತ್ತಿ ಬೆಂಕಿ ಸೆರೆಸೂರೆಗಳಿಗೆ ಸಿಕ್ಕಿಬೀಳುತ್ತಿರುವರು.
Kannada Bible (KNCL) BSI 2016
ಜನರಲ್ಲಿನ ಬುದ್ಧಿವಂತ ನಾಯಕರು ಅನೇಕರಿಗೆ ಬುದ್ಧಿಹೇಳುವರು. ಕೆಲಕಾಲ ಅವರು ಕತ್ತಿ-ಬೆಂಕಿ-ಸೆರೆ-ಸೂರೆಗಳಿಗೆ ತುತ್ತಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದರೂ ಖಡ್ಗದಿಂದಲೂ ಬೆಂಕಿಯಿಂದಲೂ ಸೆರೆಯಿಂದಲೂ ಕೊಳ್ಳೆಯಿಂದಲೂ ಕೆಲಕಾಲ ಸಿಕ್ಕಿ ಬೀಳುವರು.