Daniel 11:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆ ಉತ್ತರದ ರಾಜನು ಅವನ ಪೂರ್ವಿಕರು ಪೂಜಿಸಿದ ದೇವರುಗಳನ್ನೂ ಸ್ತ್ರೀಯರು ಪೂಜಿಸುವ ವಿಗ್ರಹಗಳನ್ನೂ ಲಕ್ಷಿಸನು. ಅವನು ಯಾವ ದೇವರನ್ನೂ ಲಕ್ಷಿಸನು. ಅದಕ್ಕೆ ಬದಲಾಗಿ ಅವನು ತನ್ನನ್ನು ತಾನು ಹೊಗಳಿಕೊಳ್ಳುವನು; ತನ್ನನ್ನು ಎಲ್ಲ ದೇವರುಗಳಿಗಿಂತಲೂ ಶ್ರೇಷ್ಠನೆಂದು ತೋರಿಸಿಕೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ಪೂರ್ವಿಕರ ದೇವರುಗಳನ್ನಾಗಲಿ, ಸ್ತ್ರೀಯರು ಮೋಹಿಸುವ ದೇವರನ್ನಾಗಲಿ, ಯಾವ ದೇವರನ್ನಾಗಲಿ ಲಕ್ಷಿಸುವುದಿಲ್ಲ. ಎಲ್ಲಾ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು.
Kannada BSI Bible 2016
ಅವನು ತನ್ನ ಪಿತೃಗಳ ದೇವರನ್ನಾಗಲೀ ಸ್ತ್ರೀಯರ ಅಪೇಕ್ಷೆ ಯನ್ನಾಗಲೀ ಲಕ್ಷಿಸುವದಿಲ್ಲ, ಯಾವ ದೇವರನ್ನೂ ಲಕ್ಷಿಸುವದಿಲ್ಲ; ಅವನು ಎಲ್ಲವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ಪಿತೃಗಳ ದೇವರುಗಳನ್ನಾಗಲಿ ಸ್ತ್ರೀಯರು ಮೋಹಿಸುವ ದೇವರನ್ನಾಗಲಿ ಯಾವ ದೇವರನ್ನಾಗಲಿ ಲಕ್ಷಿಸನು. ಎಲ್ಲಾ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು.
Kannada Bible (KNCL) BSI 2016
ಅವನು ತನ್ನ ಪೂರ್ವಜರ ದೇವರನ್ನಾಗಲಿ, ಮಹಿಳೆಯರು ಮೋಹಿಸುವ ದೇವರನ್ನಾಗಲಿ, ಯಾವ ದೇವರನ್ನೇ ಆಗಲಿ, ಲಕ್ಷಿಸನು. ಎಲ್ಲ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನ್ನ ಪಿತೃಗಳ ದೇವರನ್ನಾಗಲೀ, ಸ್ತ್ರೀಯರಿಂದ ಅಪೇಕ್ಷಿಸಿದವರನ್ನಾಗಲೀ ಅವನು ಲಕ್ಷಿಸುವುದಿಲ್ಲ, ಯಾವ ದೇವರನ್ನೂ ಲಕ್ಷಿಸುವುದಿಲ್ಲ; ಆದರೆ ಅವನು ಎಲ್ಲವುಗಳಿಗಿಂತ ಹೆಚ್ಚಿ, ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.