Daniel 11:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಉತ್ತರದ ರಾಜನು ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಅವನೊಂದಿಗೆ ಸೇರುವ ಅನ್ಯರಾಜರುಗಳನ್ನು ಬಹಳಷ್ಟು ಗೌರವಿಸುವನು. ಅಂಥ ರಾಜರು ಬಹುಜನರನ್ನು ಆಳುವಂತೆ ಮಾಡುವನು. ಆ ರಾಜನು ಅವರು ಆಳುವ ಭೂಮಿಯು ತೆರಿಗೆಯನ್ನು ಕೊಡುವಂತೆ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು; ಯಾರನ್ನು ಕಟಾಕ್ಷಿಸುವನೋ ಅವರಿಗೆ ಮಹಿಮೆ ಹೆಚ್ಚುವುದು; ಬಹಳ ಜನರ ಮೇಲೆ ಆಳ್ವಿಕೆಯನ್ನು ನಡೆಸುವನು; ದೇಶವನ್ನು ಕ್ರಯಕ್ಕೆ ಹಂಚುವನು.
Kannada BSI Bible 2016
ಹೀಗೆ ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಯಾರನ್ನು ಕಟಾಕ್ಷಿಸು ವನೋ ಅವರಿಗೆ ಘನತೆ ಹೆಚ್ಚುವದು. ಬಹುಜನರ ಮೇಲೆ ಆಳಿಕೆಯನ್ನು ಕೊಡುವನು; ದೇಶವನ್ನು ಲಾಭಕ್ಕೆ ಹಂಚುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರವಿುಸುವನು; ಯಾರನ್ನು ಕಟಾಕ್ಷಿಸುವನೋ ಅವರಿಗೆ ಮಹಿಮೆ ಹೆಚ್ಚುವದು; ಬಹುಜನರ ಮೇಲೆ ಆಳಿಕೆಯನ್ನು ಕೊಡುವನು; ದೇಶವನ್ನು ಕ್ರಯಕ್ಕೆ ಹಂಚುವನು.
Kannada Bible (KNCL) BSI 2016
ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ತನಗೆ ಮೆಚ್ಚುಗೆಯಾದವರನ್ನು ಹೆಚ್ಚಾಗಿ ಸತ್ಕರಿಸುವನು. ಅವರನ್ನು ಬಹುಜನರ ಮೇಲೆ ಅಧಿಕಾರಿಗಳನ್ನಾಗಿ ನೇಮಿಸುವನು. ಹಣಕ್ಕಾಗಿ ದೇಶವನ್ನೇ ಹಂಚಿಬಿಡುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅನ್ಯ ದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ತನಗೆ ಮೆಚ್ಚುಗೆಯಾದವರನ್ನು ಹೆಚ್ಚಾಗಿ ಸತ್ಕರಿಸುವನು. ಅವರನ್ನು ಬಹುಜನರ ಮೇಲೆ ಅಧಿಕಾರಿಗಳನ್ನಾಗಿ ನೇಮಿಸುವನು. ಹಣಕ್ಕಾಗಿ ದೇಶವನ್ನೇ ಹಂಚಿಬಿಡುವನು.