Daniel 11:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ರಾಜನು ಬಂದ ಮೇಲೆ ಅವನ ರಾಜ್ಯವು ಒಡೆಯುವದು. ಅವನ ರಾಜ್ಯವು ನಾಲ್ಕು ಹೋಳಾಗಿ ಜಗತ್ತಿನ ನಾಲ್ಕು ದಿಕ್ಕುಗಳಲ್ಲಿ ಹಂಚಿಹೋಗುವುದು. ಅವನ ರಾಜ್ಯವು ಅವನ ಮಕ್ಕಳಲ್ಲಿ ಅಥವಾ ಮೊಮ್ಮಕ್ಕಳಲ್ಲಿ ಹಂಚಲ್ಪಡುವದಿಲ್ಲ. ಅವನ ರಾಜ್ಯಕ್ಕೆ ಅವನು ಮೊದಲು ಹೊಂದಿದ್ದ ಅಧಿಕಾರವು ಇರುವದಿಲ್ಲ. ಏಕೆಂದರೆ ಅವನ ರಾಜ್ಯವನ್ನು ಅವನಿಂದ ಕಸಿದುಕೊಂಡು ಬೇರೆ ಜನರಿಗೆ ಕೊಡಲಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯವು ಒಡೆದು ನಾಲ್ಕು ದಿಕ್ಕುಗಳಿಗೂ ನಾಲ್ಕು ಪಾಲಾಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ರಾಜ್ಯವು ಪ್ರಬಲವಾಗಿದ್ದಂತೆ ಇನ್ನು ಪ್ರಬಲವಾಗದು. ಆ ರಾಜ್ಯವು ಕೀಳಲ್ಪಟ್ಟು ನಾಲ್ವರಿಗೆ ಮಾತ್ರವಲ್ಲದೆ ಇತರರಿಗೂ ಪಾಲಾಗುವುದು.
Kannada BSI Bible 2016
ಅವನು ತಲೆ ಎತ್ತಿದ ಮೇಲೆ ಅವನ ರಾಜ್ಯವು ಮುರಿಯಲ್ಪಟ್ಟು ಆಕಾಶದ ನಾಲ್ಕು ದಿಕ್ಕುಗಳ ಕಡೆಗೆ ವಿಭಾಗಿಸಲ್ಪಡುವದು; ಅವನ ಸಂತತಿಗಾಗಿ ಅಲ್ಲ, ಅಥವಾ ಅವನು ಆಳಿದ ಅಧಿಕಾರದ ಹಾಗಲ್ಲ ಅವನ ರಾಜ್ಯವು ಕೀಳಲ್ಪಟ್ಟು ಅವರಿಗಲ್ಲ, ಮತ್ತೊಬ್ಬರಿಗೆ ಹಂಚಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯವು ಒಡೆದು ನಾಲ್ಕು ದಿಕ್ಕುಗಳಿಗೂ [ನಾಲ್ಕು] ಪಾಲಾಗುವದು; ಅದು ಅವನ ಸಂತತಿಗೆ ಭಾಗವಾಗದು, ಅವನ ಆಳಿಕೆಯಲ್ಲಿ ಪ್ರಬಲವಾಗಿದ್ದಂತೆ ಇನ್ನು ಪ್ರಬಲವಾಗದು; ಆ ರಾಜ್ಯವು ಕೀಳಲ್ಪಟ್ಟು ನಾಲ್ವರಿಗೆ ಮಾತ್ರವಲ್ಲದೆ ಇತರರಿಗೂ ಪಾಲಾಗುವದು.
Kannada Bible (KNCL) BSI 2016
ಆದರೆ ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯ ಒಡೆದು ನಾಲ್ಕು ದಿಕ್ಕುಗಳಿಗೂ ಸೀಳಿಹೋಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ಪ್ರಬಲವಾಗಿ ಇದ್ದಂತೆ ಅದು ಇನ್ನು ಪ್ರಬಲವಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಉದಯಿಸಿದ ನಂತರ, ಅವನ ರಾಜ್ಯ ಒಡೆದು ಆಕಾಶದ ನಾಲ್ಕು ದಿಕ್ಕುಗಳಿಗೂ ಪಾಲಾಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ರಾಜ್ಯವು ಪ್ರಬಲವಾಗಿದ್ದಂತೆ ಅದು ಇನ್ನು ಪ್ರಬಲವಾಗದು. ಏಕೆಂದರೆ ಅವನ ರಾಜ್ಯವನ್ನು ಅವನಿಂದ ಕಿತ್ತುಕೊಂಡು ಇತರರಿಗೆ ನೀಡಲಾಗುವುದು.