Daniel 11:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಉತ್ತರದ ರಾಜನು ಸುಂದರವಾದ ನಾಡಿನ ಮೇಲೆ ಧಾಳಿ ಮಾಡುವನು. ಉತ್ತರದ ರಾಜನು ಹಲವಾರು ದೇಶಗಳನ್ನು ಗೆದ್ದುಕೊಳ್ಳುವನು. ಆದರೆ ಎದೋಮ್ಯರು, ಮೋವಾಬ್ಯರು ಮತ್ತು ಅಮ್ಮೋನಿನ ನಾಯಕರು ಅವನ ಕೈಯಿಂದ ತಪ್ಪಿಸಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂದ ಚಂದದ ದೇಶಕ್ಕೂ ನುಗ್ಗುವನು. ಅನೇಕ ಸೀಮೆಗಳು ಅವನಿಂದ ಹಾಳಾಗುವವು. ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು, ಅವನ ಕೈಯಿಂದ ತಪ್ಪಿಸಿಕೊಳ್ಳುವರು.
Kannada BSI Bible 2016
ಇದಲ್ಲದೆ ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳು ಕೆಡವಲ್ಪಡುವವು; ಆದರೆ ಎದೋಮು, ಮೋವಾಬು ಅಮ್ಮೋನನ ಮಕ್ಕಳಲ್ಲಿ ಮುಖ್ಯಸ್ಥರು ಆತನ ಕೈಯಿಂದ ತಪ್ಪಿಸಿಕೊಳ್ಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂದಚಂದದ ದೇಶಕ್ಕೂ ನುಗ್ಗುವನು; ಅನೇಕ ಸೀಮೆಗಳು ಅವನಿಂದ ಹಾಳಾಗುವವು; ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು, ಇವರುಗಳು ಅವನ ಕೈಯಿಂದ ತಪ್ಪಿಸಿಕೊಳ್ಳುವರು.
Kannada Bible (KNCL) BSI 2016
ಆ ‘ಚೆಲುವಿನ ನಾಡಿಗೂ’ ನುಗ್ಗುವನು. ಅನೇಕ ಸೀಮೆಗಳು ಅವನಿಂದ ನಾಶವಾಗುವುವು. ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು ಅವನ ಕೈಯಿಂದ ತಪ್ಪಿಸಿಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳನ್ನು ನಾಶಮಾಡುವನು; ಆದರೆ ಎದೋಮು, ಮೋವಾಬು ಮತ್ತು ಅಮ್ಮೋನಿಯರಲ್ಲಿ ಮುಖ್ಯಸ್ಥರು ಅವನ ಕೈಯಿಂದ ತಪ್ಪಿಸಿಕೊಳ್ಳುವರು.