Daniel 11:44 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗಿರಲು ಉತ್ತರದ ರಾಜನು ಪೂರ್ವದಿಕ್ಕಿನಿಂದ ಮತ್ತು ಉತ್ತರದಿಕ್ಕಿನಿಂದ ಬರುವ ಸಮಾಚಾರಗಳನ್ನು ಕೇಳಿ ಭಯಪಡುವನು ಮತ್ತು ರೊಚ್ಚಿಗೇಳುವನು. ಹಲವಾರು ದೇಶಗಳನ್ನು ಸಂಪೂರ್ಣವಾಗಿ ನಾಶಮಾಡಲು ಅವನು ಹೋಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಪೂರ್ವದಿಂದಲೂ, ಉತ್ತರದಿಂದಲೂ ಬರುವ ಸುದ್ದಿಯು ಅವನನ್ನು ಬಾಧಿಸುವುದು ಅವನು ಅತಿ ರೋಷಗೊಂಡು ಬಹಳ ಜನರನ್ನು ಧ್ವಂಸ ಮಾಡಿ, ನಿರ್ನಾಮ ಮಾಡುವುದಕ್ಕೆ ಹೊರಡುವನು.
Kannada BSI Bible 2016
ಮೂಡಣ ದಿಂದಲೂ ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವವು. ಆದದರಿಂದ ಅವನು ಮಹಾ ಉಗ್ರನಾಗಿ ಅನೇಕರನ್ನು ಸಂಹರಿಸುವದಕ್ಕೂ ನಿರ್ಮೂಲ ಮಾಡುವದಕ್ಕೂ ಹೊರಡುವನು.ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಮೂಡಲಿಂದಲೂ ಬಡಗಲಿಂದಲೂ ಬರುವ ಸುದ್ದಿಯು ಅವನನ್ನು ಬಾಧಿಸುವದು; ಅವನು ಅತಿರೋಷಗೊಂಡು ಬಹು ಜನರನ್ನು ಧ್ವಂಸಿಸಿ ನಿರ್ನಾಮ ಮಾಡುವದಕ್ಕೆ ಹೊರಡುವನು.
Kannada Bible (KNCL) BSI 2016
ಹೀಗಿರಲು ಪೂರ್ವದಿಂದ ಮತ್ತು ಉತ್ತರದಿಂದ ಬರುವ ಸುದ್ದಿ ಅವನನ್ನು ಬಾಧಿಸುವುದು. ಅವನು ಅತಿರೋಷಗೊಂಡು ಬಹುಜನರನ್ನು ಧ್ವಂಸಿಸಿ ನಿರ್ನಾಮಮಾಡಲು ಹೊರಡುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪೂರ್ವದಿಂದಲೂ, ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವುವು. ಆದ್ದರಿಂದ ಅವನು ಮಹಾ ಉಗ್ರವಾಗಿ ಅನೇಕರನ್ನು ಸಂಹರಿಸುವುದಕ್ಕೂ, ನಿರ್ಮೂಲ ಮಾಡುವುದಕ್ಕೂ ಹೊರಡುವನು.