Daniel 11:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ದಕ್ಷಿಣ ದಿಕ್ಕಿನ ರಾಜನು ಪ್ರಬಲನಾಗುವನು. ಆದರೆ ಆಗ ಅವನ ಒಬ್ಬ ಸೇನಾಧಿಪತಿಯು ದಕ್ಷಿಣದಿಕ್ಕಿನ ಅರಸನನ್ನು ಸೋಲಿಸುವನು. ಆ ಸೇನಾಧಿಪತಿಯು ಆಳಲು ಪ್ರಾರಂಭಿಸುವನು; ಅವನು ಬಹಳ ಪ್ರಭಾವಶಾಲಿಯಾಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಕ್ಷಿಣ ರಾಜ್ಯದ ರಾಜನೂ, ಅವನ ಸರದಾರರಲ್ಲಿ ಒಬ್ಬನೂ ಬಲಗೊಳ್ಳುವರು. ಸರದಾರನು ರಾಜನಿಗಿಂತ ಹೆಚ್ಚು ಬಲಗೊಂಡು ಪ್ರಭುತ್ವಕ್ಕೆ ಬರುವನು. ಅವನ ರಾಜ್ಯವು ದೊಡ್ಡ ರಾಜ್ಯವಾಗಿರುವುದು.
Kannada BSI Bible 2016
ದಕ್ಷಿಣದ ಅರಸನು ಬಲಿಷ್ಠನಾಗಿ ರುವನು. ಆದರೆ ಅವನ ಪ್ರಧಾನರಲ್ಲಿ ಒಬ್ಬನು ಇವನಿ ಗಿಂತ ಬಲಿಷ್ಠನಾಗಿದ್ದು ಅವನ ಆಳ್ವಿಕೆಯು ಮಹಾ ಆಳ್ವಿಕೆಯಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಕ್ಷಿಣದಿಕ್ಕಿನ ರಾಜನೂ ಅವನ ಸರದಾರರಲ್ಲಿ ಒಬ್ಬನೂ ಬಲಗೊಳ್ಳುವರು; ಸರದಾರನು ರಾಜನಿಗಿಂತ ಹೆಚ್ಚು ಬಲಗೊಂಡು ಪ್ರಭುತ್ವಕ್ಕೆ ಬರುವನು; ಅವನ ರಾಜ್ಯವು ದೊಡ್ಡ ರಾಜ್ಯವಾಗಿರುವದು.
Kannada Bible (KNCL) BSI 2016
“ದಕ್ಷಿಣ ದಿಕ್ಕಿನ ರಾಜನು ಮತ್ತು ಅವನ ದಳವಾಯಿಗಳಲ್ಲಿ ಒಬ್ಬನು ಶಕ್ತಿಶಾಲಿಗಳಾಗುವರು. ದಳವಾಯಿ ರಾಜನಿಗಿಂತ ಶಕ್ತಿಶಾಲಿಯಾಗಿ ಪ್ರಭುತ್ವಕ್ಕೆ ಬರುವನು. ಅವನ ರಾಜ್ಯ ದೊಡ್ಡ ರಾಜ್ಯವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಕ್ಷಿಣದ ಅರಸನು ಬಲಿಷ್ಠನಾಗುವನು. ಆದರೆ ಅವನ ಸೇನಾಪತಿಗಳಲ್ಲಿ ಒಬ್ಬನು ಅವನಿಗಿಂತ ಬಲಿಷ್ಠನಾಗುವನು ಮತ್ತು ಅವನ ಆಳ್ವಿಕೆಯು ಮಹಾ ಆಳ್ವಿಕೆಯಾಗುವುದು.