Daniel 12:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನೇಕ ಜನರು ಶುದ್ಧೀಕರಿಸಲ್ಪಡುವರು; ಅವರು ತಮ್ಮನ್ನು ತಾವು ಶುಭ್ರಗೊಳಿಸಿಕೊಳ್ಳುವರು. ಆದರೆ ದುಷ್ಟರು ದುಷ್ಟರಾಗಿಯೇ ಉಳಿಯುವರು. ಆ ದುಷ್ಟರು ಈ ಸಂಗತಿಗಳನ್ನು ಅರಿತುಕೊಳ್ಳುವದಿಲ್ಲ. ಜ್ಞಾನಿಗಳು ಇವೆಲ್ಲವನ್ನು ಅರಿತುಕೊಳ್ಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವುದು.
Kannada BSI Bible 2016
ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನೇಕರು ತಮ್ಮನ್ನು ಶುದ್ಧೀಕರಿಸಿ ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವದು.
Kannada Bible (KNCL) BSI 2016
ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ದುಷ್ಟರು ದುಷ್ಟರಾಗಿಯೇ ನಡೆಯುವರು. ಅವರಲ್ಲಿ ಯಾರಿಗೂ ವಿವೇಕವಿರದು. ಬುದ್ಧಿವಂತರಿಗೆ ವಿವೇಕವಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ಆದರೆ ದುಷ್ಟರು ದುಷ್ಟರಾಗಿಯೇ ಮುಂದುವರಿಯುವರು. ಯಾವ ದುಷ್ಟನೂ ಅರ್ಥಮಾಡಿಕೊಳ್ಳುವುದಿಲ್ಲ. ಆದರೆ ಬುದ್ಧಿವಂತರಾದವರು ಅರಿತುಕೊಳ್ಳುವರು.