Daniel 12:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ದಾನಿಯೇಲನೇ, ನೀನು ಈ ಸಂದೇಶವನ್ನು ರಹಸ್ಯವಾಗಿಡು. ಇದನ್ನು ಬರೆದ ಪುಸ್ತಕಕ್ಕೆ ಮುದ್ರೆಹಾಕು. ಅಂತ್ಯಕಾಲದವರೆಗೆ ನೀನು ಇದನ್ನು ರಹಸ್ಯವಾಗಿ ಇಡಬೇಕು. ನಿಜವಾದ ಜ್ಞಾನಕ್ಕಾಗಿ ಬಹುಜನರು ಅತ್ತಿತ್ತ ಸಂಚರಿಸುವರು. ನಿಜವಾದ ಜ್ಞಾನ ಬೆಳೆಯುವದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆ ಹಾಕು. ಅಂತ್ಯಕಾಲದ ವರೆಗೆ ಮರೆಯಾಗಿರಲಿ. ಬಹಳ ಜನರು ಅತ್ತಿತ್ತ ತಿರುಗುವರು, ತಿಳಿವಳಿಕೆಯು ಹೆಚ್ಚುವುದು.”
Kannada BSI Bible 2016
ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು, ಅಂತ್ಯಕಾಲದವರೆಗೆ ಮರೆಯಾಗಿರಲಿ; ಬಹು ಜನರು ಅತ್ತಿತ್ತ ತಿರುಗುವರು, ತಿಳುವಳಿಕೆಯು ಹೆಚ್ಚುವದು.
Kannada Bible (KNCL) BSI 2016
“ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು; ಇವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು; ಅಂತ್ಯಕಾಲದವರೆಗೆ ಮರೆಯಾಗಿರಲಿ. ಬಹುಜನರು ಅತ್ತಿತ್ತ ಅಲೆದಾಡುವರು (ಸತ್ಯಕ್ಕಾಗಿ). ಅಧರ್ಮ ಹೆಚ್ಚುತ್ತಿರುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದಾನಿಯೇಲನೇ ನೀನು, ಅಂತ್ಯಕಾಲದವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆದಿರುವ ಆ ಗ್ರಂಥಕ್ಕೆ ಮುದ್ರೆ ಹಾಕು. ಅನೇಕರು ಅತ್ತಿತ್ತ ಓಡಾಡುವರು, ಜ್ಞಾನವು ಹೆಚ್ಚಾಗುವುದು,” ಎಂದು ಹೇಳಿದನು.