Daniel 12:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾರುಮಡಿಯನ್ನು ಧರಿಸಿ ನೀರಿನ ಮೇಲೆ ನಿಂತುಕೊಂಡಿದ್ದ ಮನುಷ್ಯನು ತನ್ನ ಎರಡೂ ಕೈಗಳನ್ನು ಆಕಾಶದ ಕಡೆಗೆ ಎತ್ತಿದನು. ಅವನು ಶಾಶ್ವತವಾದ ದೇವರ ಮೇಲೆ ಆಣೆಮಾಡಿ, “ಮೂರುವರೆ ವರ್ಷ ಕಳೆಯಬೇಕು. ದೇವರ ಭಕ್ತರ ಬಲವು ಸಂಪೂರ್ಣವಾಗಿ ಮುರಿದುಹೋಗುವದು. ಆಮೇಲೆ ಎಲ್ಲಾ ಸಂಗತಿಗಳು ಜರುಗುವವು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.
Kannada BSI Bible 2016
ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕಾಶದ ಕಡೆಗೆ ಎತ್ತಿಕೊಂಡು - ಶಾಶ್ವತ ಜೀವಸ್ವರೂಪನಾಣೆ, ಒಂದುಕಾಲ ಎರಡುಕಾಲ ಅರ್ಧಕಾಲ ಕಳೆಯಬೇಕು; ದೇವರ ಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು ಎಂಬದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.
Kannada Bible (KNCL) BSI 2016
ಆ ದೂತ ಎಡಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಯುಗ, ಎರಡು ಯುಗ, ಮತ್ತು ಅರ್ಧ ಯುಗ ಕಳೆಯಬೇಕು. ದೇವಜನರಿಗಾಗುವ ಹಿಂಸೆಬಾಧೆಗಳು ಸಂಪೂರ್ಣವಾಗಿ ನಿಂತಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನದಿಯ ನೀರಿನ ಮೇಲೆ ನಿಂತು ನಾರುಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತರಾಗಿರುವವರ ಮೇಲೆ ಆಣೆಯಿಟ್ಟು, “ಅದು ಒಂದುಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು; ಕೊನೆಗೆ ಪರಿಶುದ್ಧರ ಬಲವನ್ನು ಮುರಿದ ಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.