Daniel 2:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಸ್ದೀಯರು, “ಮಹಾಪ್ರಭುಗಳು ಕೇಳುತ್ತಿರುವುದನ್ನು ಹೇಳುವವರು ಈ ಜಗತ್ತಿನಲ್ಲಿ ಯಾರೂ ಇಲ್ಲ. ಈ ಹಿಂದೆ ಯಾವ ಅರಸನೂ ತನ್ನ ಆಸ್ಥಾನ ಪಂಡಿತರಿಗೂ ಮಂತ್ರವಾದಿಗಳಿಗೂ ಇಂತಹ ಪ್ರಶ್ನೆಯನ್ನು ಕೇಳಲಿಲ್ಲ. ಅತ್ಯಂತ ದೊಡ್ಡ ಮತ್ತು ಪ್ರಬಲನಾದ ಅರಸನೂ ತನ್ನ ಪಂಡಿತರಿಗಾಗಲಿ ಜೋಯಿಸರಿಗಾಗಲಿ ಇಂಥದ್ದನ್ನು ಕೇಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ಪಂಡಿತರು ರಾಜನ ಸನ್ನಿಧಿಯ ಮುಂದೆ, “ರಾಜನು ಕೇಳಿದ ಸಂಗತಿಯನ್ನು ತಿಳಿಸಬಲ್ಲವನು ಲೋಕದಲ್ಲಿ ಯಾರೂ ಇಲ್ಲ; ಎಷ್ಟೇ ಬಲಿಷ್ಠನು, ಎಷ್ಟೇ ಪ್ರಬಲನು ಆದ ಯಾವ ಅರಸನೂ ಜೋಯಿಸರನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ.
Kannada BSI Bible 2016
ಆಗ ಕಸ್ದೀಯರು ಅರಸನಿಗೆ ಉತ್ತರವಾಗಿ--ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕ ದಲ್ಲಿಲ್ಲ; ಆದದರಿಂದ ಯಾವ ಅರಸನಾದರೂ ಯಾವ ಪ್ರಭುವಾದರೂ ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ ಜೋತಿಷ್ಯನಲ್ಲೂ ಕಸ್ದೀಯನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆ ಪಂಡಿತರು ಸನ್ನಿಧಿಯ ಮುಂದೆ - ರಾಜನು ಕೇಳಿದ ಸಂಗತಿಯನ್ನು ತಿಳಿಸಬಲ್ಲವನು ಲೋಕದಲ್ಲಿ ಯಾವನೂ ಇಲ್ಲ; ಎಷ್ಟೇ ಬಲಿಷ್ಠನು, ಎಷ್ಟೇ ಪ್ರಬಲನು ಆದ ಯಾವ ಅರಸನೂ ಜೋಯಿಸನನ್ನಾಗಲಿ ಮಾಟಗಾರನನ್ನಾಗಲಿ ಪಂಡಿತನನ್ನಾಗಲಿ ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ;
Kannada Bible (KNCL) BSI 2016
ಆಗ ಆ ಪಂಡಿತರು ಸನ್ನಿಧಿಯ ಮುಂದೆ, “ರಾಜರು ಕೇಳುವ ಸಂಗತಿಯನ್ನು ತಿಳಿಸಬಲ್ಲವನು ಈ ಲೋಕದಲ್ಲಿ ಯಾವನೂ ಇಲ್ಲ. ಎಷ್ಟೆಷ್ಟೋ ಬಲಿಷ್ಠರಾದ, ಪ್ರಬಲರಾದ ಯಾವ ಅರಸರೂ ಜೋಯಿಸನನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪಂಡಿತರು ಅರಸನಿಗೆ ಉತ್ತರವಾಗಿ, “ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕದಲ್ಲಿಲ್ಲ! ಆದ್ದರಿಂದ ಯಾವ ಅರಸನಾದರೂ, ಯಾವ ಪ್ರಭುವಾದರೂ, ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ, ಜೋತಿಷ್ಯನಲ್ಲೂ, ಪಂಡಿತನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ.