Daniel 2:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಹಾಪ್ರಭುಗಳು ಕೇಳುವ ವಿಷಯ ಅತಿ ಕಠಿಣವಾದದ್ದು. ದೇವತೆಗಳು ಮಾತ್ರ ಅರಸನ ಕನಸನ್ನೂ ಅದರ ಅರ್ಥವನ್ನೂ ತಿಳಿಸಲು ಸಾಧ್ಯ. ಆದರೆ ದೇವತೆಗಳು ಮಾನವರೊಂದಿಗೆ ವಾಸಮಾಡುವುದಿಲ್ಲ” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಜನು ಕೇಳುವ ಸಂಗತಿಯು ಅತಿ ಕಷ್ಟವಾದದ್ದು. ನರಜನ್ಮದವರ ಮಧ್ಯೆ ವಾಸಿಸುವ ದೇವರುಗಳೇ ಹೊರತು ಇನ್ಯಾರೂ ರಾಜನ ಸಮ್ಮುಖದಲ್ಲಿ ಅದನ್ನು ತಿಳಿಸಲಾರರು” ಎಂದು ಉತ್ತರಕೊಟ್ಟರು.
Kannada BSI Bible 2016
ಅರಸನು ಕೇಳುವ ಸಂಗತಿಯು ಅಪರೂಪವಾದದ್ದು ಮತ್ತು ಮಾನವರ ಸಂಗಡ ವಾಸಮಾಡದ ದೇವರುಗಳೇ ಹೊರತು ಇನ್ಯಾರೂ ಅದನ್ನು ಅರಸನ ಮುಂದೆ ತಿಳಿಸಲಾರರು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಜನು ಕೇಳುವ ಸಂಗತಿಯು ಅತಿಕಷ್ಟವಾದದು; ನರಜನ್ಮದವರ ಮಧ್ಯೆ ವಾಸಿಸದ ದೇವರುಗಳೇ ಹೊರತು ಇನ್ನಾರೂ ರಾಜನ ಸಮ್ಮುಖದಲ್ಲಿ ತಿಳಿಸಲಾರರು ಎಂದು ಉತ್ತರಕೊಟ್ಟರು.
Kannada Bible (KNCL) BSI 2016
ರಾಜರು ಕೇಳುತ್ತಿರುವ ಸಂಗತಿ ಅತಿಕಷ್ಟವಾದುದು. ನರಮಾನವರ ನಡುವೆ ವಾಸಮಾಡದ ದೇವರುಗಳೇ ಹೊರತು ಇನ್ನಾರೂ ರಾಜರ ಸಮ್ಮುಖದಲ್ಲಿ ಇದನ್ನು ತಿಳಿಸಲಾರರು,” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಕೇಳುವ ಸಂಗತಿಯು ಕಷ್ಟಕರವಾದದ್ದು. ಮಾನವರ ಮಧ್ಯದಲ್ಲಿ ವಾಸಿಸದ ದೇವರುಗಳೇ ಹೊರತು, ಬೇರಾರೂ ಇದನ್ನು ಅರಸನ ಸನ್ನಿಧಿಯಲ್ಲಿ ತಿಳಿಸಲಾರರು.”