Daniel 2:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ದಾನಿಯೇಲನು ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹೋಗಿ ತನಗೆ ಸ್ವಲ್ಪ ಸಮಯ ಕೊಡುವುದಾದರೆ ತಾನು ಅರಸನ ಕನಸನ್ನೂ ಅದರ ಅರ್ಥವನ್ನೂ ತಿಳಿಸುವುದಾಗಿ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ದಾನಿಯೇಲನು ಅರಮನೆಗೆ ಬಂದು, “ನನಗೆ ಸಮಯವನ್ನು ಕೊಟ್ಟರೆ ನಾನು ಆ ಕನಸಿನ ಅರ್ಥವನ್ನು ರಾಜನಿಗೆ ವಿವರಿಸುವೆನು” ಎಂದು ಅರಿಕೆ ಮಾಡಿದನು.
Kannada BSI Bible 2016
ಆಗ ದಾನಿಯೇಲನು ಒಳಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ದಾನಿಯೇಲನು ಅರಮನೆಗೆ ಸೇರಿ - ನನಗೆ ಸಮಯವನ್ನು ಕೊಟ್ಟರೆ ನಾನು ಆ ಕನಸಿನ ಅರ್ಥವನ್ನು ರಾಜನಿಗೆ ವಿವರಿಸುವೆನು ಎಂದು ಅರಿಕೆಮಾಡಿದನು.
Kannada Bible (KNCL) BSI 2016
ಆಮೇಲೆ ದಾನಿಯೇಲನು ಅರಮನೆಗೆ ಹೋಗಿ, “ನನಗೆ ಸಮಯಕೊಟ್ಟರೆ ಆ ಕನಸಿನ ಅರ್ಥವನ್ನು ರಾಜರಿಗೆ ನಾನು ವಿವರಿಸಬಲ್ಲೆ,” ಎಂದು ಅರಿಕೆ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾನಿಯೇಲನು ಅರಮನೆಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ, ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.