Daniel 2:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ದಾನಿಯೇಲನು ಅರ್ಯೋಕನ ಬಳಿಗೆ ಹೋದನು. ಅರಸನಾದ ನೆಬೂಕದ್ನೆಚ್ಚರನು ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲುವದಕ್ಕೆ ಅರ್ಯೋಕನನ್ನು ಆರಿಸಿದ್ದನು. ದಾನಿಯೇಲನು ಅರ್ಯೋಕನಿಗೆ, “ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲಬೇಡ. ನನ್ನನ್ನು ಅರಸನ ಹತ್ತಿರ ಕರೆದುಕೊಂಡು ಹೋಗು. ನಾನು ಅವನಿಗೆ ಅವನ ಕನಸನ್ನು ಮತ್ತು ಅದರ ಅರ್ಥವನ್ನು ತಿಳಿಸುತ್ತೇನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂತರ ದಾನಿಯೇಲನು ಬಾಬೆಲಿನ ವಿದ್ವಾಂಸರನ್ನು ಕೊಲ್ಲುವುದಕ್ಕೆ ರಾಜನು ನೇಮಿಸಿದ ಅರ್ಯೋಕನ ಬಳಿಗೆ ಹೋಗಿ ಅವನಿಗೆ, “ಬಾಬೆಲಿನ ವಿದ್ವಾಂಸರನ್ನು ಕೊಲ್ಲಬೇಡ; ನನ್ನನ್ನು ರಾಜನ ಸನ್ನಿಧಿಗೆ ಬಿಡು; ನಾನು ಕನಸಿನ ಅಭಿಪ್ರಾಯವನ್ನು ರಾಜನಿಗೆ ತಿಳಿಸುವೆನು” ಎಂದು ಹೇಳಿದನು.
Kannada BSI Bible 2016
ಆದದರಿಂದ ದಾನಿಯೇಲನು ಬಾಬೆಲಿನ ಜ್ಞಾನಿ ಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ ಹೇಳಿದ್ದೇ ನಂದರೆ--ನೀನು ಬಾಬೆಲಿನ ಜ್ಞಾನಿಗಳನ್ನು ನಾಶಮಾಡ ಬೇಡ; ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು ಆಗ ನಾನು ಅರಸನಿಗೆ ಅರ್ಥವನ್ನು ತಿಳಿಸು ತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದಾನಿಯೇಲನು ಬಾಬೆಲಿನ ವಿದ್ವಾಂಸರನ್ನು ಕೊಲ್ಲುವದಕ್ಕೆ ರಾಜನು ನೇವಿುಸಿದ ಅರ್ಯೋಕನ ಬಳಿಗೆ ಹೋಗಿ ಅವನಿಗೆ - ಬಾಬೆಲಿನ ವಿದ್ವಾಂಸರನ್ನು ಕೊಲ್ಲಬೇಡ; ನನ್ನನ್ನು ರಾಜನ ಸನ್ನಿಧಿಗೆ ಬಿಡು; ನಾನು ಕನಸಿನ ಅಭಿಪ್ರಾಯವನ್ನು ರಾಜನಿಗೆ ತಿಳಿಸುವೆನು ಎಂದು ಹೇಳಿದನು.
Kannada Bible (KNCL) BSI 2016
ತರುವಾಯ ದಾನಿಯೇಲನು ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲುವುದಕ್ಕೆ ರಾಜನು ನೇಮಿಸಿದ್ದ ಅರ್ಯೋಕನ ಬಳಿಗೆ ಹೋದನು. ಅವನಿಗೆ, “ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲಬೇಡ. ನನ್ನನ್ನು ರಾಜನ ಸನ್ನಿಧಿಗೆ ಸೇರಿಸಿಬಿಡು, ನಾನು ಆ ಕನಸಿನ ಉದ್ದೇಶವನ್ನು ರಾಜನಿಗೆ ತಿಳಿಸುವೆನು,” ಎಂದು ಕೇಳಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾನಿಯೇಲನು ಬಾಬಿಲೋನಿನ ಜ್ಞಾನಿಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ, “ನೀನು ಬಾಬಿಲೋನಿನ ಜ್ಞಾನಿಗಳನ್ನು ಕೊಲ್ಲಬೇಡ. ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು. ಆಗ ನಾನು ಅರಸನಿಗೆ ಅವನ ಕನಸಿನ ಅರ್ಥವನ್ನು ತಿಳಿಸುತ್ತೇನೆ,” ಎಂದನು.