Daniel 2:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಸನು ದಾನಿಯೇಲನಿಗೆ (ಬೇಲ್ತೆಶಚ್ಚರನಿಗೆ), “ನೀನು ನನ್ನ ಕನಸನ್ನೂ ಅದರ ಅರ್ಥವನ್ನೂ ಹೇಳಬಲ್ಲೆಯಾ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಜನು ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನನ್ನು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲೆಯಾ?” ಎಂದು ಕೇಳಿದನು.
Kannada BSI Bible 2016
ಆಗ ಅರಸನು ಬೇಲ್ತೆಶಚ್ಚರ ನೆಂಬ ದಾನಿಯೇಲನನ್ನು ಕುರಿತು--ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಜನು ಬೇಲ್ತೆಶಚ್ಚರನೆಂಬ ಅಡ್ಡ ಹೆಸರಿನ ದಾನಿಯೇಲನನ್ನು - ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸಬಲ್ಲೆಯಾ ಎಂದು ಕೇಳಿದನು.
Kannada Bible (KNCL) BSI 2016
ರಾಜನು ಬೇಲ್ತೆಶಚ್ಚರನೆಂದು ಹೆಸರು ಪಡೆದಿದ್ದ ದಾನಿಯೇಲನನ್ನು ನೋಡಿ, “ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ತಿಳಿಸಬಲ್ಲೆಯಾ?” ಎಂದು ವಿಚಾರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಬೇಲ್ತೆಶಚ್ಚರನೆಂಬ ದಾನಿಯೇಲನನ್ನು ಕುರಿತು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ?” ಎಂದನು.