Daniel 2:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಅರಸನು ಅವರಿಗೆ, “ನಾನೊಂದು ಕನಸು ಕಂಡೆ. ಅದು ನನ್ನನ್ನು ಪೀಡಿಸುತ್ತಿದೆ. ಆ ಕನಸಿನ ಅರ್ಥವೇನೆಂಬುದನ್ನು ನಾನು ತಿಳಿಯಬಯಸುತ್ತೇನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಜನು ಅವರಿಗೆ, “ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಿಸುತ್ತದೆ” ಎಂಬುದಾಗಿ ಹೇಳಿದನು.
Kannada BSI Bible 2016
ಆಗ ಅರಸನು ಅವರಿಗೆ--ನಾನು ಒಂದು ಕನಸ್ಸು ಕಂಡಿದ್ದೇನೆ; ಆ ಕನಸಿನ ಅರ್ಥವನ್ನು ತಿಳಿಯುವದಕ್ಕಾಗಿ ನನ್ನ ಆತ್ಮವು ಕಳವಳಗೊಂಡಿದೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಜನು ಅವರಿಗೆ - ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಗೊಂಡಿದೆ ಎಂಬದಾಗಿ ಹೇಳಲು
Kannada Bible (KNCL) BSI 2016
ರಾಜನು ಅವರಿಗೆ, “ನಾನು ಒಂದು ಕನಸು ಕಂಡೆ. ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಗೊಂಡಿದೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು ಅವರಿಗೆ, “ನಾನು ಒಂದು ಕನಸು ಕಂಡಿದ್ದೇನೆ. ಅದರ ಅರ್ಥವೇನೋ ಎಂದು ತಿಳಿಯಲು ನನ್ನ ಮನಸ್ಸು ತತ್ತರಗೊಂಡಿದೆ,” ಎಂದನು.