Daniel 2:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ನಿನಗೆ ಅಧಿಕಾರವನ್ನು ಕೊಟ್ಟಿದ್ದಾನೆ. ಆ ದೇವರು ನಿನ್ನನ್ನು ಎಲ್ಲೆಡೆಯಲ್ಲಿರುವ ಜನರ ಮೇಲೆ, ಕಾಡುಪ್ರಾಣಿಗಳ ಮೇಲೆ, ಪಕ್ಷಿಗಳ ಮೇಲೆ ಆಳುವಂತೆ ಮಾಡಿದ್ದಾನೆ. ಅರಸನಾದ ನೆಬೂಕದ್ನೆಚ್ಚರನೇ, ನೀನೇ ಆ ಪ್ರತಿಮೆಯ ಬಂಗಾರದ ತಲೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನರಜಾತಿಯವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ, ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ; ನೀನೇ ಆ ಬಂಗಾರದ ತಲೆ.
Kannada BSI Bible 2016
ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಜಾತಿಯವರು ವಾಸಿಸುವ ಸಕಲ ಪ್ರಾಂತಗಳಲ್ಲಿ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ.
Kannada Bible (KNCL) BSI 2016
ನರಮಾನವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನಿಮ್ಮ ಕೈಗೆ ಒಪ್ಪಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರನ್ನು, ಭೂಮಿಯ ಮೃಗಗಳನ್ನು, ಆಕಾಶದ ಪಕ್ಷಿಗಳನ್ನು, ಜೀವಿಸುವಂಥಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು, ಅವೆಲ್ಲವುಗಳಿಗೆ ನಿನ್ನನ್ನು ಆಳುವವನಾಗಿ ಮಾಡಿದ್ದಾರೆ. ಆ ಬಂಗಾರದ ತಲೆಯು ನೀನೇ.