Daniel 2:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಆ ಕಸ್ದೀಯರು ಅರಮೇಯಿಕ್ ಭಾಷೆಯಲ್ಲಿ, “ಅರಸನೇ ಚಿರಂಜೀವಿಯಾಗಿರು. ನಾವು ನಿನ್ನ ಸೇವಕರು. ದಯವಿಟ್ಟು ನಮಗೆ ನಿನ್ನ ಕನಸನ್ನು ಹೇಳು. ನಾವು ಅದರ ಅರ್ಥವನ್ನು ತಿಳಿಸುತ್ತೇವೆ” ಎಂದು ಉತ್ತರಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು” ಎಂದು ಅರಿಕೆಮಾಡಿದರು.
Kannada BSI Bible 2016
ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು, ಕನಸನ್ನು ನಿನ್ನ ಸೇವಕರಿಗೆ ಹೇಳು; ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ - ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು ಎಂದು ಅರಿಕೆಮಾಡಿದರು.
Kannada Bible (KNCL) BSI 2016
ಆ ಪಂಡಿತರು ಅರಮೀಯ ಭಾಷೆಯಲ್ಲಿ ರಾಜನಿಗೆ, “ಅರಸರೇ, ಚಿರಂಜೀವಿಯಾಗಿರಿ! ಆ ಕನಸನ್ನು ನಿಮ್ಮ ದಾಸರಾದ ನಮಗೆ ಹೇಳಿ. ಅದರ ತಾತ್ಪರ್ಯವನ್ನು ತಿಳಿಸುತ್ತೇವೆ,” ಎಂದು ಅರಿಕೆಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪಂಡಿತರು ಅರಸನಿಗೆ ಅರಮಾಯ ಭಾಷೆಯಲ್ಲಿ, “ಅರಸನೇ, ನಿರಂತರವಾಗಿ ಬಾಳು! ಕನಸನ್ನು ನಿನ್ನ ಸೇವಕರಿಗೆ ಹೇಳು, ಆಗ ನಾವು ಅದರ ಅರ್ಥವನ್ನು ತಿಳಿಸುವೆವು,” ಎಂದು ಹೇಳಿದರು.