Daniel 2:45 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅರಸನಾದ ನೆಬೂಕದ್ನೆಚ್ಚರನೇ,ಾಲ್ಕನೇ ರಾಜ್ಯದ ರಾಜರ ಕಾರದಿಲ್ಲ.ಕೂಡಿದೇ ರೀತಿ ನಾಲ್ರಣ ಮತ್ತೊಂದು ಅಂಶ ಜೇಡಿಮಣ್ಣಾಗಿದ್ದಂತೇದೆಂದು ಇದರ ಅರ್ಥ.ಡಿಪುಡಿ ಮಾಡಿತು. ್ನ ಚೂರುಚೂರು ಮಾಡಿತು. ಭವಿಷ್ಯದಲ್ಲಿ ಏನಾಗುವದೆಂಬುದನ್ನು ದೇವರು ನಿನಗೆ ಈ ರೀತಿಯಲ್ಲಿ ತೋರಿಸಿದ್ದಾನೆ. ನಿನ್ನ ಕನಸು ನಿಜ. ಅದರ ಅರ್ಥವು ನಂಬಿಕೆಗೆ ಯೋಗ್ಯವಾಗಿದೆ” ಎಂದು ವಿವರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು.
Kannada BSI Bible 2016
ಆ, ಕಲ್ಲು ಕೈಗಳ ಸಹಾಯವಿಲ್ಲದೆ ಬೆಟ್ಟದೊಳಗಿಂದ ಒಡೆಯಲ್ಪಟ್ಟು ಕಬ್ಬಿಣವನ್ನೂ ಹಿತ್ತಾಳೆಯನ್ನೂ ಮಣ್ಣನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಧ್ವಂಸ ಮಾಡಿತೆಂದು ನೀನು ನೋಡಿದ್ದು ಇದೇ. ಮಹಾದೇವರು ಇನ್ನು ಮೇಲೆ ಸಂಭವಿಸುವಂಥದ್ದನ್ನು ಅರಸನಿಗೆ ತಿಳಿಯಪಡಿಸಿ ದ್ದಾನೆ; ಕನಸು ನಿಶ್ಚಯವಾಗಿದೆ; ಅದರ ಅರ್ಥಗಳೂ ಸತ್ಯವಾಗಿವೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಬೆಟ್ಟದೊಳಗಿಂದ] ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ ತಾಮ್ರ ಮಣ್ಣು ಬೆಳ್ಳಿ ಬಂಗಾರಗಳನ್ನು ಚೂರುಚೂರುಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ; ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ; ಕನಸು ನಿಜ, ಅದರ ಅರ್ಥವು ನಂಬತಕ್ಕದು ಎಂದು ಹೇಳಿದನು.
Kannada Bible (KNCL) BSI 2016
ಬೆಟ್ಟದಿಂದ ಒಂದು ಗುಂಡುಬಂಡೆ, ಯಾವ ಕೈಯೂ ಮುಟ್ಟದೆಯೇ, ಸಿಡಿದುಬಂದು ಕಬ್ಬಿಣ-ಕಂಚು-ಮಣ್ಣು-ಬೆಳ್ಳಿ-ಬಂಗಾರ ಇವುಗಳನ್ನು ಚೂರುಚೂರು ಮಾಡಿದ್ದನ್ನು ನೀವು ನೋಡಿದಿರಿ. ಇದರಿಂದ ಪರಲೋಕ ದೇವರು ಮುಂದೆ ನಡೆಯಲಿರುವ ವಿಷಯಗಳನ್ನು ರಾಜರಾದ ತಮಗೆ ತಿಳಿಯಪಡಿಸಿದ್ದಾರೆ. ಆ ಕನಸು ನಿಜವಾದುದು. ಅದರ ಅರ್ಥವೂ ನಂಬತಕ್ಕದ್ದು,” ಎಂದು ವಿವರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾನವ ಹಸ್ತಗಳಿಲ್ಲದೆ, ಆದರೆ ಬೆಟ್ಟದೊಳಗಿಂದ ಕಡಿದು ತೆಗೆದ ಗುಂಡು ಬಂಡೆಯು ಕಬ್ಬಿಣವನ್ನೂ, ಕಂಚನ್ನೂ, ಮಣ್ಣನ್ನೂ, ಬೆಳ್ಳಿಯನ್ನೂ ಹಾಗೂ ಬಂಗಾರವನ್ನೂ ತುಂಡುತುಂಡಾಗಿ ಮಾಡಿದ ಆ ಗುಂಡು ಕಲ್ಲಿನ ದರ್ಶನವು ಇದೆ. “ಇದರಿಂದ ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ಮಹಾ ದೇವರು ಅರಸನಿಗೆ ತೋರಿಸಿದ್ದಾರೆ. ಕನಸು ನಿಜವಾದದ್ದು, ಅದರ ಅರ್ಥವು ನಂಬತಕ್ಕದ್ದು,” ಎಂದನು.