Daniel 2:46 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅರಸನಾದ ನೆಬೂಕದ್ನೆಚ್ಚರನು ದಾನಿಯೇಲನ ಮುಂದೆ ಅಡ್ಡಬಿದ್ದು ಅವನನ್ನು ಹೊಗಳಿದನು; ಅವನ ಗೌರವಾರ್ಥವಾಗಿ ಧೂಪಹಾಕಿ ನೈವೇದ್ಯಮಾಡಬೇಕೆಂದು ಆಜ್ಞಾಪಿಸಿದನು. ಆಮೇಲೆ ಅರಸನು ದಾನಿಯೇಲನಿಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ರಾಜನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, “ದಾನಿಯೇಲನನ್ನು ಪೂಜಿಸಿ, ಅವನಿಗೆ ನೈವೇದ್ಯಮಾಡಿ ಧೂಪ ಹಾಕಬೇಕು” ಎಂದು ಆಜ್ಞಾಪಿಸಿದನು.
Kannada BSI Bible 2016
ಆಗ ಅರಸನಾದ ನೆಬೂಕದ್ನೆ ಚ್ಚರನು ಅಡ್ಡಬಿದ್ದು ದಾನಿಯೇಲನಿಗೆ ನಮಸ್ಕರಿಸಿರಿ, ಅವನಿಗೆ ಕಾಣಿಕೆಗಳನ್ನೂ ಸುಗಂಧದ್ರವ್ಯ ಅರ್ಪಿಸಬೇ ಕೆಂದೂ ಆಜ್ಞಾಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ರಾಜನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು ದಾನಿಯೇಲನನ್ನು ಪೂಜಿಸಿ ಅವನಿಗೆ ನೈವೇದ್ಯ ಮಾಡಿ ಧೂಪಹಾಕಬೇಕೆಂದು ಆಜ್ಞಾಪಿಸಿ
Kannada Bible (KNCL) BSI 2016
ಇದನ್ನು ಆಲಿಸಿದ ರಾಜ ನೆಬೂಕದ್ನೆಚ್ಚರನು ಎದ್ದು ಅಡ್ಡಬಿದ್ದನು. ದಾನಿಯೇಲನನ್ನು ಪೂಜಿಸಿ, ಅವನಿಗೆ ನೈವೇದ್ಯಮಾಡಿ, ಧೂಪಾರತಿ ಎತ್ತಬೇಕೆಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, ದಾನಿಯೇಲನಿಗೆ ನಮಸ್ಕರಿಸಿ, ಅವನಿಗೆ ಕಾಣಿಕೆಗಳನ್ನೂ, ಸುಗಂಧ ದ್ರವ್ಯವನ್ನೂ ಅರ್ಪಿಸಬೇಕೆಂದೂ ಆಜ್ಞಾಪಿಸಿದನು.