Daniel 2:48 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತರುವಾಯ ಅರಸನು ದಾನಿಯೇಲನಿಗೆ ತನ್ನ ರಾಜ್ಯದಲ್ಲಿ ಬಹುಮುಖ್ಯವಾದ ಉದ್ಯೋಗವನ್ನು ಕೊಟ್ಟನು. ಅಮೂಲ್ಯವಾದ ಕಾಣಿಕೆಗಳನ್ನೂ ಕೊಟ್ಟನು. ನೆಬೂಕದ್ನೆಚ್ಚರನು ದಾನಿಯೇಲನನ್ನು ಬಾಬಿಲೋನ್ ಸಂಸ್ಥಾನದ ಅಧಿಪತಿಯನ್ನಾಗಿ ಮಾಡಿದನು. ಬಾಬಿಲೋನಿನ ಎಲ್ಲಾ ವಿದ್ವಾಂಸರ ಮುಖ್ಯಸ್ಥನನ್ನಾಗಿ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ರಾಜನು ದಾನಿಯೇಲನನ್ನು ಸನ್ಮಾನಿಸಿ, ಅವನಿಗೆ ಅಮೂಲ್ಯವಾದ ಅನೇಕ ಬಹುಮಾನಗಳನ್ನೂ ದಾನಗಳನ್ನು ಕೊಟ್ಟು, ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ, ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇಮಿಸಿದನು.
Kannada BSI Bible 2016
ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್‌ ಮೇಷಕ್‌ ಮತ್ತು ಅಬೇದ್‌ನೆಗೋ ಎಂಬವರಿಗೆ ಬಾಬೆಲ್‌ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ರಾಜನು ದಾನಿಯೇಲನನ್ನು ದೊಡ್ಡಸ್ತಿಕೆಗೆ ತಂದು ಅವನಿಗೆ ಅಮೂಲ್ಯವಾದ ಬಹುಮಾನಗಳನ್ನು ಕೊಟ್ಟು ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇವಿುಸಿದನು.
Kannada Bible (KNCL) BSI 2016
ಬಳಿಕ ರಾಜನು ದಾನಿಯೇಲನನ್ನು ದೊಡ್ಡ ಪದವಿಗೆ ಏರಿಸಿದನು. ಅಮೂಲ್ಯವಾದ ಬಹುಮಾನಗಳನ್ನು ಕೊಟ್ಟನು. ಬಾಬಿಲೋನಿನ ಸಂಸ್ಥಾನವನ್ನೆಲ್ಲ ಅವನಿಗೆ ಅಧೀನಪಡಿಸಿ ಬಾಬಿಲೋನಿನ ಎಲ್ಲಾ ವಿದ್ವಾಂಸರಿಗೂ ಅವನನ್ನು ಅಧ್ಯಕ್ಷನನ್ನಾಗಿ ನೇಮಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು ದಾನಿಯೇಲನನ್ನು ಉನ್ನತ ಸ್ಥಾನದಲ್ಲಿರಿಸಿ, ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟನು. ಸಮಸ್ತ ಬಾಬಿಲೋನಿನ ಪ್ರಾಂತಗಳಿಗೆ ಅಧಿಕಾರಿಯನ್ನಾಗಿಯೂ, ಬಾಬಿಲೋನಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿಪತಿಯನ್ನಾಗಿಯೂ ನೇಮಿಸಿದನು.