Daniel 2:49 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬಾಬಿಲೋನ್ ಸಂಸ್ಥಾನದ ದೊಡ್ಡ ಅಧಿಕಾರಿಗಳನ್ನಾಗಿ ನೇಮಿಸಬೇಕೆಂದು ದಾನಿಯೇಲನು ಅರಸನನ್ನು ಕೇಳಿಕೊಂಡನು. ದಾನಿಯೇಲನು ಹೇಳಿದಂತೆ ಅರಸನು ಮಾಡಿದನು. ದಾನಿಯೇಲನು ಅರಸನ ಸನ್ನಿಧಿಯಲ್ಲಿರುವ ಪ್ರಮುಖರಲ್ಲಿ ಒಬ್ಬನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾನಿಯೇಲನು ಬಿನ್ನಹ ಮಾಡಲು ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನು ಅರಮನೆಯಲ್ಲಿ ಉಳಿದನು.
Kannada BSI Bible 2016
ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್‌ ಮೇಷಕ್‌ ಮತ್ತು ಅಬೇದ್‌ನೆಗೋ ಎಂಬವರಿಗೆ ಬಾಬೆಲ್‌ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾನಿಯೇಲನು ಬಿನ್ನಹ ಮಾಡಲು ರಾಜನು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು; ದಾನಿಯೇಲನೋ ಅರಮನೆಯಲ್ಲಿ ನಿಂತನು.
Kannada Bible (KNCL) BSI 2016
ದಾನಿಯೇಲನ ಕೋರಿಕೆಯ ಪ್ರಕಾರ ರಾಜನು ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರನ್ನು ಬಾಬಿಲೋನಿನ ಪ್ರಾಂತ್ಯಾಧಿಪತಿಗಳನ್ನಾಗಿ ನೇಮಿಸಿದನು. ದಾನಿಯೇಲನು ಮಾತ್ರ ಅರಮನೆಯಲ್ಲೇ ಕಾರ್ಯನಿರತನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾನಿಯೇಲನು ಅರಸನನ್ನು ಬೇಡಿಕೊಂಡಿದ್ದರಿಂದ, ಅರಸನು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರನ್ನು ಬಾಬಿಲೋನಿನ ಸಂಸ್ಥಾನದ ಕಾರ್ಯಾಧಿಕಾರಿಗಳನ್ನಾಗಿ ನೇಮಿಸಿದನು. ದಾನಿಯೇಲನು ಅರಸನ ಅರಮನೆಯಲ್ಲಿ ಉಳಿದನು.