Daniel 2:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀವು ನನಗೆ ನನ್ನ ಕನಸನ್ನೂ ಅದರ ಅರ್ಥವನ್ನೂ ಹೇಳಿದರೆ ಕಾಣಿಕೆಗಳನ್ನೂ ಬಹುಮಾನಗಳನ್ನೂ ಕೊಡುತ್ತೇನೆ ಮತ್ತು ಮಹಾಸನ್ಮಾನವನ್ನು ಮಾಡುತ್ತೇನೆ. ಆದ್ದರಿಂದ ನೀವು ನನಗೆ ಕನಸನ್ನೂ ಅದರ ಅರ್ಥವನ್ನೂ ಹೇಳಿರಿ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಆ ಕನಸನ್ನೂ, ಅದರ ಅರ್ಥವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನ ಮತ್ತು ಬಹುಮಾನಗಳೂ, ವಿಶೇಷ ಸನ್ಮಾನಗಳೂ ಲಭಿಸುವವು. ಆದಕಾರಣ ಆ ಕನಸನ್ನೂ, ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ” ಎಂದು ಹೇಳಿದನು.
Kannada BSI Bible 2016
ಆದರೆ ನೀವು ಕನ ಸನ್ನೂ ಅದರ ಅರ್ಥಗಳನ್ನೂ ತಿಳಿಸಿದರೆ, ದಾನಗಳನ್ನೂ ಬಹುಮಾನಗಳನ್ನೂ ಬಹಳ ಘನವನ್ನೂ ನನ್ನಿಂದ ಪಡೆಯುವಿರಿ; ಹೀಗಿರಲಾಗಿ ಕನಸನ್ನೂ ಅದರ ಅಭಿ ಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಆ ಕನಸನ್ನೂ ಅದರ ಅಭಿಪ್ರಾಯವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನಬಹುಮಾನಗಳೂ ವಿಶೇಷಸನ್ಮಾನಗಳೂ ಲಭಿಸುವವು; ಆದಕಾರಣ ಆ ಕನಸನ್ನೂ ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಲು ಪಂಡಿತರು -
Kannada Bible (KNCL) BSI 2016
ನೀವು ಆ ಕನಸನ್ನೂ ಅದರ ಉದ್ದೇಶವನ್ನೂ ತಿಳಿಸಿದ್ದೇ ಆದರೆ ನನ್ನಿಂದ ನಿಮಗೆ ದಾನ ಬಹುಮಾನಗಳೂ ವಿಶೇಷ ಸನ್ಮಾನಗಳೂ ದೊರಕುವುವು. ಆದಕಾರಣ ಆ ಕನಸನ್ನೂ ಅದರ ಉದ್ದೇಶವನ್ನೂ ನನಗೆ ತಿಳಿಸಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀವು ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಿದರೆ, ದಾನಬಹುಮಾನಗಳನ್ನೂ, ಬಹಳ ಘನತೆಯನ್ನೂ ನನ್ನಿಂದ ಪಡೆಯುವಿರಿ. ಹೀಗಿರಲಾಗಿ ಕನಸನ್ನೂ, ಅದರ ವ್ಯಾಖ್ಯಾನವನ್ನೂ ನನಗೆ ತಿಳಿಸಿರಿ,” ಎಂದು ಹೇಳಿದನು.