Daniel 2:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ನನಗೆ ನನ್ನ ಕನಸಿನ ಬಗ್ಗೆ ಹೇಳದಿದ್ದರೆ ನಿಮಗೆ ಶಿಕ್ಷೆಯಾಗುವದೆಂದು ನೀವು ಬಲ್ಲಿರಿ. ನೀವೆಲ್ಲ ನನಗೆ ಸುಳ್ಳು ಹೇಳಬೇಕೆಂದು ನಿರ್ಧರಿಸಿಕೊಂಡಿದ್ದೀರಿ. ನೀವು ಹೆಚ್ಚಿನ ಸಮಯವನ್ನು ಪಡೆಯಲಿಚ್ಛಿಸುತ್ತಿದ್ದೀರಿ. ನಿಮಗೆ ಹೇಳಿದ್ದನ್ನು ನಾನು ಮರೆತುಬಿಡಬಹುದೆಂದು ನೀವು ಭಾವಿಸುತ್ತಿರುವಿರಿ. ಈಗ ನನ್ನ ಕನಸನ್ನು ತಿಳಿಸಿರಿ. ನೀವು ಕನಸನ್ನು ತಿಳಿಸಿದರೆ ಅದರ ನಿಜವಾದ ಅರ್ಥವನ್ನೂ ಹೇಳಬಲ್ಲಿರಿ” ಎಂದು ಅವರಿಗೆ ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾಲಾಂತರವನ್ನು ನಿರೀಕ್ಷಿಸಿಕೊಂಡೇ ನನ್ನ ಮುಂದೆ ಕೆಟ್ಟ ಸುಳ್ಳುಗಳನ್ನು ಆಡುತ್ತಿರಬೇಕೆಂದು ಒಪ್ಪಂದ ಮಾಡಿಕೊಂಡಿದ್ದೀರಿ; ಅಂತು ಆ ಕನಸನ್ನು ತಿಳಿಸಬೇಕು; ಆದುದರಿಂದ ನೀವು ಅದರ ಅರ್ಥವನ್ನೂ ವಿವರಿಸಬಲ್ಲಿರೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು.
Kannada BSI Bible 2016
ಆದರೆ ನೀವು ಕನಸ್ಸನ್ನು ನನಗೆ ತಿಳಿಸದೆ ಹೋದರೆ ನಿಮಗೆ ಒಂದೇ ನಿರ್ಣಯ ಉಂಟು; ಕಾಲ ಬದಲಾಗುವ ವರೆಗೂ ನೀವು ನನ್ನ ಮುಂದೆ ಕೆಟ್ಟ ಸುಳ್ಳು ಮಾತುಗಳನ್ನು ಮಾತನಾಡಲು ಸಿದ್ಧಮಾಡಿಕೊಂಡಿರುವಿರಿ; ಆದದರಿಂದ ಕನಸನ್ನು ನನಗೆ ತಿಳಿಸಿ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲಿ ರೆಂದು ನಾನು ತಿಳಿದುಕೊಂಡಿರುತ್ತೇನೆ ಎಂದು ಹೇಳಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾಲಾಂತರವನ್ನು ನಿರೀಕ್ಷಿಸಿಕೊಂಡೇ ನನ್ನ ಮುಂದೆ ಕೆಟ್ಟ ಸುಳ್ಳುಗಳನ್ನು ಆಡುತ್ತಿರಬೇಕೆಂದು ಕಟ್ಟುಮಾಡಿಕೊಂಡಿದ್ದೀರಿ; ಅಂತು ಆ ಕನಸನ್ನು ತಿಳಿಸಬೇಕು; ಅದರಿಂದ ನೀವು ಅದರ ಅಭಿಪ್ರಾಯವನ್ನೂ ವಿವರಿಸಬಲ್ಲಿರೆಂದು ತಿಳಿದುಕೊಳ್ಳುವೆನು ಎಂದು ಹೇಳಿದನು.
Kannada Bible (KNCL) BSI 2016
ಕಾಲ ಬದಲಾಗುತ್ತಿರುತ್ತದೆ ಎಂದುಕೊಂಡೇ ನನ್ನ ಮುಂದೆ ಇಲ್ಲಸಲ್ಲದ್ದನ್ನು ಆಡಲು ಒಪ್ಪಂದ ಮಾಡಿಕೊಂಡಿದ್ದೀರಿ. ಅಂತು ಆ ಕನಸನ್ನು ನೀವು ನನಗೆ ತಿಳಿಸಲೇಬೇಕು. ಆಗ ಅದರ ಉದ್ದೇಶವನ್ನು ವಿವರಿಸಬಲ್ಲಿರೆಂದು ನಾನು ತಿಳಿದುಕೊಳ್ಳುವೆನು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಕನಸನ್ನು ನನಗೆ ಹೇಳದಿದ್ದರೆ, ನಿಮಗೆ ಒಂದೇ ಒಂದು ಶಿಕ್ಷೆಯಿದೆ. ತಪ್ಪು ಮಾರ್ಗಕ್ಕೆ ನಡೆಸುವ ಹಾಗೂ ಕೆಟ್ಟ ಸಂಗತಿಗಳನ್ನು ನನಗೆ ಹೇಳಿ, ಪರಿಸ್ಥಿತಿಯನ್ನು ನೀವು ನನಗೆ ವಿರೋಧವಾಗಿ ಒಪ್ಪಂದ ಮಾಡಿಕೊಂಡಿದ್ದೀರಿ, ಬದಲಾವಣೆಯನ್ನು ನಿರೀಕ್ಷಿಸುವಂತೆ. ಆದ್ದರಿಂದ ಕನಸನ್ನು ನನಗೆ ಹೇಳಲೇಬೇಕು. ಆಗ ಅದನ್ನು ವ್ಯಾಖ್ಯಾನ ಮಾಡಿ, ವಿವರಿಸುವಿರೆಂದು ನಾನು ತಿಳಿಯುವೆನು,” ಎಂದನು.